Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಧಿಸಲು ಆಸಕ್ತಿ -ಸಮರ್ಪಣಾಭಾವ ಅಗತ್ಯ:...

ಸಾಧಿಸಲು ಆಸಕ್ತಿ -ಸಮರ್ಪಣಾಭಾವ ಅಗತ್ಯ: ರೆಮೋನಾ ಪಿರೇರ

ವಾರ್ತಾಭಾರತಿವಾರ್ತಾಭಾರತಿ21 Sept 2025 4:07 PM IST
share
ಸಾಧಿಸಲು ಆಸಕ್ತಿ -ಸಮರ್ಪಣಾಭಾವ ಅಗತ್ಯ: ರೆಮೋನಾ ಪಿರೇರ

ಮಲ್ಪೆ, ಸೆ.21: ನಮ್ಮಲ್ಲಿ ಆಸಕ್ತಿ ಮತ್ತು ಸಮರ್ಪಣಾಭಾವ ಇದ್ದಾಗ ಯಾವುದೇ ಅಡೆತಡೆಗಳನ್ನು ಎದುರಿಸಿ ಸಾಧನೆಯ ಶಿಖರವನ್ನು ಏರಲು ಸಾಧ್ಯ ಎಂದು ಭರತನಾಟ್ಯದಲ್ಲಿ ವಿಶ್ವ ದಾಖಲೆ ಮಾಡಿದ ಕಲಾವಿದೆ ರೆಮೋನಾ ಇವೆಟ್ ಪಿರೇರಾ ಹೇಳಿದ್ದಾರೆ.

ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ರವಿವಾರ ಮಹಿಳಾ ಆಯೋಗ ಹಾಗೂ ಸ್ತ್ರೀ ಸಂಘಟನೆ ವತಿಯಿಂದ ಆಯೋಜಿಸಿದ್ದ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಪ್ರತಿಯೊಬ್ಬರಲ್ಲೂ ಕೂಡ ವಿಶೇಷವಾದ ಪ್ರತಿಭೆಗಳಿದ್ದು ಅದಕ್ಕೆ ಹೆತ್ತವರ ಹಾಗೂ ಸಮಾಜದ ಪ್ರೋತ್ಸಾಹ ಲಭಿಸಿದಾಗ ಸಾಧನೆ ಮಾಡಲು ಉತ್ಸಾಹ ಬರುತ್ತದೆ. ಹೆಣ್ಣು ಮಕ್ಕಳಿಗೆ ಕಠಿಣವಾದ ಸಾಧನೆಗಳನ್ನು ಮಾಡುವಾಗ ಸಮಾಜದಿಂದ ಪ್ರೋತ್ಸಾಹದ ಜೊತೆಗೆ ಟೀಕೆಗಳು ಲಭಿಸುವುದು ಕೂಡ ಸಹಜ. ಆದರೆ ಅದರ ಬಗ್ಗೆ ಹೆಚ್ಚಿನ ತಲೆಕೆಡಿಸದೆ ಸಾಧನೆ ಮಾಡಬೇಕು ಎನ್ನುವ ಒಂದೇ ಗುರಿಯೊಂದಿಗೆ ಮುನ್ನುಗ್ಗಿದಾಗ ಯಶಸ್ಸು ಶತಸಿದ್ದ ಎಂದರು.

ಅಧ್ಯಕ್ಷತೆ ವಹಿಸಿದ್ದ ಚರ್ಚಿನ ಧರ್ಮಗುರು ವಂ.ಡೆನಿಸ್ ಡೇಸಾ ಮಾತನಾಡಿ, ಹೆಣ್ಣು ಅಬಲೆಯಲ್ಲ ಬದಲು ಸಬಲೆ ಎನ್ನುವುದು ಈಗಾಗಲೇ ತಮ್ಮ ಸಾಧನೆಗಳ ಮೂಲಕ ತೋರಿಸಿಕೊಟ್ಟಿದ್ದಾರೆ. ಹಿಂದಿನ ಪರಿಸ್ಥಿತಿಗಳಿಗೆ ಹೋಲಿಸಿದರೆ ಹೆಣ್ಣು ಇಂದು ಎಲ್ಲ ರಂಗದಲ್ಲೂ ಮುಂದಿದ್ದಾಳೆ. ಈ ದೇಶದಲ್ಲಿ ಹೆಣ್ಣಿಗೆ ಅವಕಾಶಗಳು ಸಾಕಷ್ಟಿವೆ ಅವುಗಳನ್ನು ಬಳಸಿಕೊಳ್ಳುವ ಮೂಲಕ ಎತ್ತರಕ್ಕೆ ಬೆಳೆಯಬೇಕು ಎಂದು ತಿಳಿಸಿದರು.

ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಲೆಸ್ಲಿ ಆರೋಜ ಶುಭ ಹಾರೈಸಿದರು.

ಚರ್ಚಿನ ವತಿಯಿಂದ ಕಲಾವಿದೆ ರೆಮೋನಾ ಇವೆಟ್ ಪಿರೇರರನ್ನು ಸನ್ಮಾನಿಸಲಾಯಿತು. ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸ್ಥಳೀಯ ಕಾನ್ವೆಂಟಿನ ಸುಪಿರೀಯರ್ ಸಿಸ್ಟರ್ ಸುಷ್ಮಾ, ಚರ್ಚಿನ ಪಾಲನಾ ಮಂಡಳಿಯ ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಚಾಲಕಿ ವನಿತಾ ಫೆರ್ನಾಂಡಿಸ್, ರೆಮೋನಾ ಪಿರೇರ ತಾಯಿ ಗ್ಲ್ಯಾಡಿಸ್ ಪಿರೇರ, ಹೆಣ್ಣು ಮಕ್ಕಳ ಪ್ರತಿನಿಧಿಗಳಾಗಿ ಶರ್ಲಿನ್ ಫೆರ್ನಾಂಡಿಸ್, ಅನೋರಾ ಫೆರ್ನಾಂಡಿಸ್, ಚರ್ಚಿನ ಆಗ್ನೆಲ್ ಡಿಸೋಜ ಉಪಸ್ಥಿತರಿದ್ದರು.

ಸ್ತ್ರೀ ಸಂಘಟನೆಯ ಪ್ರಿಯಾ ರೊಡ್ರಿಗಸ್ ಸ್ವಾಗತಿಸಿದರು. ಶಾಂತಿ ಫೆರ್ನಾಂಡಿಸ್ ವಂದಿಸಿದರು.

ಚರ್ಚಿನ ಹೆಣ್ಣು ಮಕ್ಕಳು ಸಮಾಜದಲ್ಲಿ ಮಹಿಳೆಯ ಸ್ಥಾನಮಾನವನ್ನು ಪರಿಚಯಿಸುವ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೃತ್ಯ, ಕಿರು ನಾಟಕಗಳ ಮೂಲಕ ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X