ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನ ದಿನಾಚರಣೆ

ಉಡುಪಿ: ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನ ಸಂಸ್ಥಾಪನ ದಿನಾಚಾರಣೆ ನಡೆಯಿತು.
ಮುಖ್ಯ ಅತಿಥಿಯಾಗಿ ಮಾನವಿಕ ವಿಭಾಗದ ಮುಖ್ಯಸ್ಥ ರೋಹಿತ್ ಎಸ್. ಅಮೀನ್ ಧ್ವಜಾರೋಹಣ ನೆರವೇರಿಸಿ ದರು. ವಿದ್ಯಾರ್ಥಿಗಳ ಕ್ಷೇಮಪಾಲನ ವಿಭಾಗದ ಮುಖ್ಯಸ್ಥೆ ಡಾ.ಪ್ರೀತಿ ಹರೀಶ್ ರಾಜ್ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಸಂಯೋಜನ ಅಧಿಕಾರಿ ಡಾ.ನವೀನ್ ಚಂದ್ರ ಇ.ಆ., ಹಾಗೂ ಅಮೋಘ ಗಟ್ಕರ್, ಕಾಲೇಜಿನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಕಾರ್ಯದರ್ಶಿ ಸಮೀರ್ ಸ್ವಾಗತಿಸಿದರು. ಅಂಕಿತ ವಂದಿಸಿದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿ ದರು. ಸಂದೇಶ್ ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡರು.
Next Story





