ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ವಸಂತ್ ಕಿಣಿ ಆಯ್ಕೆ

ಉಡುಪಿ, ಸೆ.25: ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 33ನೇ ವಾರ್ಷಿಕ ಮಹಾಸಭೆಯು ಸೆ.20ರಂದು ಅಧ್ಯಕ್ಷ ಹರೀಶ್ ಕುಂದರ್ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ಸಭಾಂಗಣದಲ್ಲಿ ಜರಗಿತು.
2025-26ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಎಂ.ವಸಂತ್ ಕಿಣಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಎಂ.ವಲ್ಲಭ್ ಭಟ್, ಹೃಷಿಕೇಶ್ ಹೆಗ್ಡೆ, ಹಾಗೂ ಕೃಷ್ಣಪ್ರಸಾದ್ ಶೆಟ್ಟಿ, ಕಾರ್ಯದರ್ಶಿಯಾಗಿ ಕೆ.ರಂಜನ್ ಕಲ್ಕೂರ, ಕೋಶಾಧಿಕಾರಿಯಾಗಿ ಆನಂದ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕೆ.ಮಹೇಶ್ ಉಡುಪ, ಸಮೀರ್ ಮೊಹಮ್ಮದ್ ಹಾಗೂ ಸುರೇಂದ್ರ ನಾಯಕ್ ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಂದರ್, ಕಾರ್ಯದರ್ಶಿ ಕೃಷ್ಣಪ್ರಸಾದ್ ಶೆಟ್ಟಿ ಹಾಗೂ ರಂಜಾನ್ ಕಲ್ಕೂರ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಸಂಘದ ಸ್ಥಾಪಕ ಅಧ್ಯಕ್ಷ ವಿನ್ಸೆಂಟ್ ಪಿಂಟೋ ಅವರನ್ನು ಸನ್ಮಾನಿಸ ಲಾಯಿತು. ಸಂಘದ ಮಾಜಿ ಅಧ್ಯಕ್ಷರಾದ ಎಂ.ವಿಶ್ವನಾಥ ಭಟ್, ಜಾನ್ ಡಿಸಿಲ್ವಾ. ಎಂ.ಚಿತ್ತರಂಜನ್ ಭಟ್ ಶುಭಾಂಶನೆಗೈದರು. ಸಂಘದ ಮಾಜಿ ಅಧ್ಯಕ್ಷ ಎಂ.ಗಣೇಶ್ ಕಿಣಿ, ಸದಸ್ಯ ಎಂ.ವಾಮನ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.







