Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ...

ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ನಿಯಮಾನುಸಾರ ಕ್ರಮ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ25 Sept 2025 7:22 PM IST
share
ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ನಿಯಮಾನುಸಾರ ಕ್ರಮ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ಉಡುಪಿ, ಸೆ.25: ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗ ಸೂಚಿಗಳನ್ನು ಪಾಲಿಸಬೇಕು. ಅದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸಲು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರೆಯಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಹೊಸದಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯುವವರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗ್ನಿಶಾಮಕ, ಪೊಲೀಸ್ ಇಲಾಖೆ, ತಹಶೀಲ್ದಾರರ ಕಛೇರಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.

ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪ, ಜನನಿಬಿಡ ಪ್ರದೇಶ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದು ಅವರು ಸೂಚಿಸಿದರು.

ಪಟಾಕಿ ಮಾರಾಟ ಮಾಡುವ ಸ್ಥಳಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಈ ಸಮಯದಲ್ಲಿ ಉತ್ಪಾದನೆ ಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯ ಯಾವುದೇ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ, ಆಸ್ಪತ್ರೆಗಳ ಆವರಣ ಸೇರಿದಂತೆ ಇನ್ನಿತರೆ ನಿಷೇಧಿತ ಪ್ರದೇಶಗಳ ವ್ಯಾಪ್ತಿಯಲ್ಲಿ ಪಟಾಕಿಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯತೆ ಹೊಂದಿ ಮೇಲ್ವಿಚಾರಣೆ ನಡೆಸಬೇಕು. ಯಾವುದೇ ಸಾರ್ವ ಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ, ಸಾರ್ವಜನಿಕರು ಆರೋಗ್ಯಕ್ಕೆ ಹಾಗೂ ಪರಿಸರ ಮಾಲಿನ್ಯಕ್ಕೆ ಧಕ್ಕೆ ಉಂಟಾಗದಅತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಕಮೀಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಮೊದಲಾದವರು ಉಪಸ್ಥಿತರಿದ್ದರು.

‘ನಿಷೇಧಿತ ಪಟಾಕಿ ಕಂಡುಬಂದಲ್ಲಿ ಮುಟ್ಟುಗೋಲು’

ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರಕಾರದ ಸೂಚನೆ ಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮು ಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ತಾಲೂಕು ಸಮಿತಿಯು ಈ ಬಗ್ಗೆ ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ನಿಯಮಬಾಹಿರವಾಗಿ ಪಟಾಕಿ ದಾಸ್ತಾನು ಮಾಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.

ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ ಆರ್ ಕೋಡ್ ಇದ್ದು, ಈ ಚಿಹ್ನೆ ಹೊಂದಿರುವ ಬಗ್ಗೆ ಪರಿಸರ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹಸಿರು ಪಟಾಕಿಯ ಚಿಹ್ನೆ ಇಲ್ಲದೇ ಇದ್ದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X