Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒತ್ತಡದಿಂದಲೂ ಹೃದಯಾಘಾತ: ಹೃದ್ರೋಗ ತಜ್ಞೆ...

ಒತ್ತಡದಿಂದಲೂ ಹೃದಯಾಘಾತ: ಹೃದ್ರೋಗ ತಜ್ಞೆ ಡಾ.ಮೋನಿಕಾ

ವಾರ್ತಾಭಾರತಿವಾರ್ತಾಭಾರತಿ29 Sept 2025 7:18 PM IST
share
ಒತ್ತಡದಿಂದಲೂ ಹೃದಯಾಘಾತ: ಹೃದ್ರೋಗ ತಜ್ಞೆ ಡಾ.ಮೋನಿಕಾ
ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ -ತುರ್ತು ಆರೈಕೆ ತರಬೇತಿ

ಉಡುಪಿ, ಸೆ.29: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ(ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾ ಟದ(ಸಿಪಿಆರ್) ತರಬೇತಿ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ.ಮೋನಿಕಾ ಜೆ. ಮಾತನಾಡಿ, ಯುವಜನತೆಯಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಧೂಮಪಾನ, ಜೆನೆಟಿಕ್ ಹಾಗೂ ಒತ್ತಡವೇ ಮುಖ್ಯ ಕಾರಣ. ಕೊರೋನಾ ಸೇರಿ ದಂತೆ ಎಲ್ಲ ರೀತಿಯ ವೈರಸ್‌ಗಳು ಕೂಡ ಹೃದಯಕ್ಕೆ ಅಪಾಯ ತಂದೊಡ್ಡುತ್ತದೆ. ಕೊರೋನಾ ಲಸಿಕೆಯಿಂದ ಹೃದಯಾಘಾತಗಳು ಸಂಭವಿ ಸುವುದು ಈವರೆಗೆ ಸಾಬೀತಾಗಿಲ್ಲ ಎಂದು ತಿಳಿಸಿದರು.

ಹೃದಯ ದಿನಾಚರಣೆಯ ಈ ವರ್ಷದ ಥೀಮ್ -ಡೋಂಟ್ ಮಿಸ್ ಎ ಬೀಟ್(ಹೃದಯದ ಒಂದು ಬಡಿತವನ್ನು ತಪ್ಪಿಸಿ ಕೊಳ್ಳಬೇಡಿ) ಎಂಬು ದಾಗಿದೆ. ಪ್ರತಿವರ್ಷ ಹೃದಯದ ತಪಾಸಣೆ ಮಾಡಬೇಕು. ದಿನದ 24ಗಂಟೆಗಳಲ್ಲಿ ಒಂದು ಗಂಟೆಯಾದರೂ ಆರೋಗ್ಯಕ್ಕಾಗಿ ಮೀಸಲಿಡಬೇಕು. ಇದರಲ್ಲಿ ವಾಕಿಂಗ್ ಹೆಚ್ಚು ಉತ್ತಮ. ಈ ಮೂಲಕ ಒತ್ತಡ ಕೂಡ ಕಡಿಮೆ ಮಾಡ ಬಹುದು ಎಂದು ಅವರು ಹೇಳಿದರು.

ಆಸ್ಪತ್ರೆಯ ತುರ್ತು ವೈದ್ಯಕೀಯ ಸಲಹೆಗಾರ ಡಾ.ಆಕಾಶ್ ಕಲ್ಲೂರೆ ಮತ್ತು ಅವರ ತಂಡವು ಬಿಎಲ್‌ಎಸ್ ಮತ್ತು ಸಿಪಿಆರ್‌ನ ಪ್ರಾಯೋಗಿಕ ತರಬೇತಿಯನ್ನು ನೀಡಿ, ಹೃದಯಾಘಾತ, ರಸ್ತೆ ಸಂಚಾರ ಅಪಘಾತಗಳು ಮತ್ತು ಪಾರ್ಶ್ವ ವಾಯುಗಳಂತಹ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ತಕ್ಷಣದ ಪ್ರತಿಕ್ರಿಯೆಯ ನಿರ್ಣಾಯಕ ಪಾತ್ರದ ಕುರಿತು ಮಾತನಾಡಿದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮಾತನಾಡಿ, ವಿಶ್ವ ಹೃದಯ ದಿನದ ಪ್ರಯುಕ್ತ ಆಸ್ಪತ್ರೆಯು ಪೊಲೀಸ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಮೆಸ್ಕಾಮ್ ಉದ್ಯೋಗಿಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾನಿರತರಿಗೆ ಇದೇ ರೀತಿಯ ತರಬೇತಿಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಖಜಾಂಚಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಭಾಗವಾಗಿ ಪತ್ರಕರ್ತರಿಗೆ ಉಚಿತ ಬಿಪಿ ತಪಾಸಣೆ, ರಕ್ತ ಪರೀಕ್ಷೆ ಮತ್ತು ಇಸಿಜಿ ತಪಾಸಣೆಗಳನ್ನು ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X