Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಗನವಾಡಿ ನೌಕರರಿಗೆ ಸಮೀಕ್ಷೆಯಿಂದ...

ಅಂಗನವಾಡಿ ನೌಕರರಿಗೆ ಸಮೀಕ್ಷೆಯಿಂದ ರಿಯಾಯಿತಿ ನೀಡಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ29 Sept 2025 7:40 PM IST
share
ಅಂಗನವಾಡಿ ನೌಕರರಿಗೆ ಸಮೀಕ್ಷೆಯಿಂದ ರಿಯಾಯಿತಿ ನೀಡಲು ಆಗ್ರಹಿಸಿ ಧರಣಿ

ಉಡುಪಿ, ಸೆ.29: ಅನಾರೋಗ್ಯ ಪೀಡಿತ ಅಂಗನವಾಡಿ ನೌಕರರಿಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಿಂದ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ ಮಾತನಾಡಿ, ಕೆಲವು ಅಂಗನವಾಡಿ ನೌಕರರು ಕೆಲವು ಸಮಸ್ಯೆಗಳಿಗಾಗಿ ಸಮೀಕ್ಷೆಯಿಂದ ರಿಯಾಯಿತಿ ಕೇಳಿದರೂ ಜನಪ್ರತಿನಿಧಿ ಕಾಯ್ದೆಯಡಿ ವಜಾ ಮಾಡುವುದಾಗಿ ಅಧಿಕಾರಿಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗದ ಸುತ್ತೋಲೆಯಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಾಮಾಜಿಕ ಸಮೀಕ್ಷೆಗೆ ಸಿ ದರ್ಜೆ ನೌಕರ ರನ್ನು ನೇಮಿಸಿಕೊಳ್ಳಬೇಕು ಎಂದು ಹೇಳಿದ್ದರೂ ಸುತ್ತೋಲೆಯನ್ನು ಕೆಳ ಅಧಿಕಾರಿಗಳು ಕಡೆಗಣಿಸುತ್ತಿದ್ದಾರೆ. ನೌಕರರನ್ನು ಜೈಲಿಗೆ ಕಳುಹಿಸುವ ಅಧಿಕಾರಿಗಳ ಬೆದರಿಕೆ ಮಹಿಳೆಯರಿಗೆ ಮಾನಸಿಕ ಹಿಂಸೆಯಾಗುತ್ತಿದೆ. ಅಲ್ಲದೇ ಸಮೀಕ್ಷೆಯನ್ನು ಸ್ಥಳೀಯವಾಗಿ ನೀಡದೇ ಬೇರೆ ಬೇರೆ ದೂರದ ಗ್ರಾಮಗಳಿಗೆ ನಿಯೋಜಿಸಿರುವುದು ಅಂಗನವಾಡಿ ನೌಕರರಿಗೆ ಸಮಸ್ಯೆಯಾಗಿದೆ ಎಂದು ಅವರು ದೂರಿದರು.

ಈ ಕೆಲಸಗಳ ಜೊತೆ ಜೊತೆಗೆ ಎಫ್‌ಎಸ್‌ಆರ್ ಬಿಎಲ್‌ಓ ಕೆಲಸಗಳನ್ನು ಮಾಡಬೇಕು ಎಂದು ನೋಟಿಸ್ ನೀಡುತ್ತಿ ರುವುದು ನೌಕರರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೂಡ ಈ ಮಹಿಳೆಯರನ್ನು ಮಾನವೀಯತೆ ಇಲ್ಲದೆ ಗುಲಾಮ ರಂತೆ ದುಡಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಸ್ವೀಕರಿಸಿದರು. ಸಿ ದರ್ಜೆಯ ನೌಕರರು ಜಿಲ್ಲೆ ಯಲ್ಲಿ ಕಡಿಮೆ ಇರುವುದರಿಂದ ಅಂಗನವಾಡಿ ನೌಕರರು ಸಮೀಕ್ಷಗೆ ಕೈಜೋಡಿಸಬೇಕು. ಇಲ್ಲವಾದಲ್ಲಿ ನೌಕರರ ಮೇಲೆ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷ ಭಾರತಿ, ಪ್ರಮುಖರಾದ ಯಶೋಧ ಕೆ., ಆಶಾಲತಾ, ಶಾಂತಾ, ಪ್ರೇಮ, ಪ್ರಮೀಳಾ ಉಡುಪಿ, ಜಯಲಕ್ಷ್ಮಿ, ಸರೋಜ, ಸರೋಜಿನಿ ಬ್ರಹ್ಮಾವರ, ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ, ಜಿಲ್ಲಾ ಕೋಶಾಧಿಕಾರಿ ಕವಿರಾಜ್ ಎಸ್.ಕಾಂಚನ್ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X