ಮಣಿಪಾಲದಲ್ಲಿ ವಿಶ್ವ ರೇಬಿಸ್ ಜಾಗೃತಿ ದಿನ

ಉಡುಪಿ, ಅ.4: ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಮಣಿಪಾಲದ ಕೆಎಂಸಿ ಗ್ರೀನ್ಸ್ ಆವರಣ ದಲ್ಲಿ ವಿಶ್ವ ರೇಬಿಸ್ ದಿನದ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಅವರು ರೇಬಿಸ್ ಜಾಗೃತಿ ಕಲಾಕೃತಿಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ನಾಯಿಯಿಂದ ಬರುವ ರೇಬಿಸ್ ಕುರಿತು ಜಾಗೃತಿ ಮೂಡಿಸುವಂತಹ ಘೋಷವಾಕ್ಯಗಳನ್ನು ಕೆಎಂಸಿಯ ವೈದ್ಯಕೀಯ ಮತ್ತು ವೈದ್ಯಕೇತರ ಸಿಬ್ಬಂದಿಗಳು ಪ್ರದರ್ಶಿಸಿದರು.
ಸಹ ಪ್ರಾಧ್ಯಾಪಕಿ ಡಾ.ಈಶ್ವರೀ ಕೆ. ರೇಬಿಸ್ ಕುರಿತು ವಹಿಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಮಾಹಿತಿ ಗಳನ್ನು ನೀಡಿದರು. ಪ್ರೊ. ಡಾ. ಮುರಳೀಧರ್ ಎಂ. ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವೈದ್ಯಕೀಯ ವಿದ್ಯಾರ್ಥಿಗಳು ಬಾಗವಹಿಸಿದ್ದರು.
Next Story





