ಭಾರತೀಯ ಸೇನಾ ಸೇರ್ಪಡೆ: ತರಬೇತಿ ಮುಂದೂಡಿಕೆ

ಉಡುಪಿ, ಅ.5: ಭಾರತೀಯ ಸೇನಾ ಇತರೆ ಯೂನಿಫಾರಂ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅ.6ರಂದು ರ್ಯಾಲಿಯನ್ನು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸ ಲಾಗಿತ್ತು. ಈ ರ್ಯಾಲಿಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡ ಲಾಗಿದೆ. ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Next Story





