ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ

ಉಡುಪಿ, ಅ.7: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ, ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ, ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಆಡಳಿತ ಮಂಡಳಿ ಸದಸ್ಯರು, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು. ಸಂಯುಕ್ತ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.







