ಸೈಫುದ್ದೀನ್ ಕೊಲೆ ಪ್ರಕರಣ: ಆರೋಪಿಗೆ ರಿಧಾ ಶಭನಾಗೆ ನ್ಯಾಯಾಂಗ ಬಂಧನ

ಉಡುಪಿ, ಅ.8: ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದ ಆರೋಪಿ ರಿಧಾ ಶಭನಾ(27)ಗೆ ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ರಿಧಾ ಶಭನಾಳನ್ನು ಪೊಲೀಸರು ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಉಡುಪಿಯ ಸಿನೀಯರ್ ಸಿವಿಲ್ ಜಡ್ಜ್ ಹಾಗೂ ಸಿಜೆಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಲಯವು ಆಕೆಯನ್ನು ಅ.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಆರೋಪಿಗಳಾದ ಮಹಮದ್ ಫೈಸಲ್ ಖಾನ್, ಮೊಹಮದ್ ಶರೀಫ್, ಅಬ್ದುಲ್ ಶುಕೂರು ಯಾನೆ ಅದ್ದು ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇವರು ನಾಲ್ವರು ಆರೋಪಿಗಳನ್ನು ಪೊಲೀಸರು ಅ.18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
Next Story





