Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ:...

ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ: ಸೈನಾ ನೆಹ್ವಾಲ್

ವಾರ್ತಾಭಾರತಿವಾರ್ತಾಭಾರತಿ14 Oct 2025 7:05 PM IST
share
ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ: ಸೈನಾ ನೆಹ್ವಾಲ್

ಉಡುಪಿ, ಅ.14: ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ಅದರಲ್ಲಿ ನಾನು ಸಕ್ರಿಯವಾಗಿಯೂ ಇಲ್ಲ. ಮುಂದೆ ರಾಜಕೀಯದ ಬಗ್ಗೆ ಆಸಕ್ತಿ ಬಂದರೆ ನೋಡುತ್ತೇನೆ. ರಾಜಕೀಯ ತುಂಬಾ ಸುಲಭ ಎಂದು ಭಾವಿಸುತ್ತಾರೆ. ಆದರೆ ಅದು ಊಹಿಸಿದಷ್ಟು ಸುಲಭವಿಲ್ಲ. ಪ್ರತಿಯೊಂದು ಕ್ಷೇತ್ರವು ಭಿನ್ನವಾಗಿರುತ್ತದೆ ಎಂದು ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಹೇಳಿದ್ದಾರೆ.

ಮಣಿಪಾಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ನರೇಂದ್ರ ಮೋದಿ ಚಿಂತನೆ ತುಂಬಾ ಇಷ್ಟವಾಗುತ್ತದೆ. ರಾಜಕೀಯ ನಾಯಕರಲ್ಲಿ ನರೇಂದ್ರ ಮೋದಿ ನನ್ನ ನೆಚ್ಚಿನ ಮುಖಂಡರಾಗಿದ್ದು, ಆದುದರಿಂದ ಕೆಲವೊಮ್ಮೆ ಅವರ ಇವೆಂಟ್ ಗಳಿಗೆ ತೆರಳಿ ಬೆಂಬಲಿಸುತ್ತೇನೆ ಎಂದು ತಿಳಿಸಿದರು.

ಬ್ಯಾಡ್ಮಿಂಟನ್ ನನ್ನ ಹೃದಯಕ್ಕೆ ತುಂಬಾ ಹತ್ತಿರದ ಕ್ರೀಡೆಯಾಗಿದೆ. ನಾನು ಈಗ ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ. ದೈಹಿಕ ಕ್ಷಮತೆಯ ಕಾರಣಕ್ಕೆ ಇದು ಅನಿವಾರ್ಯವಾಗಿತ್ತು. ಆಟವಾಡುವ ಉತ್ಸಾಹ ಇದ್ದರೂ, ಅದಕ್ಕೆ ದೇಹ ಸ್ಪಂದಿಸುತ್ತಿಲ್ಲ. ಕೋಚಿಂಗ್ ನೀಡುವ ಬಗ್ಗೆ ನನಗೆ ಆಸಕ್ತಿ ಇಲ್ಲ. ಪುಟ್ಟ ಮಕ್ಕಳನ್ನು ಕ್ರೀಡೆಯುತ್ತ ಸೆಳೆಯುವುದು ನನ್ನ ಆಸಕ್ತಿಯಾಗಿದೆ ಎಂದರು.

ಕೋಚಿಂಗ್ ತುಂಬಾ ಕಠಿಣ. ಆಡುವುದಕ್ಕಿಂತಲೂ ಕೋಚಿಂಗ್‌ಗೆ ಹೆಚ್ಚಿನ ಪರಿಶ್ರಮ ಹಾಕಬೇಕಾಗುತ್ತದೆ. 10-15 ಗಂಟೆ ನಿಂತುಕೊಂಡು ತರಬೇತಿ ನೀಡುವುದು ಸುಲಭವಲ್ಲ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದೇನೆ. ಬ್ಯಾಡ್ಮಿಂಟನ್ ಮಾತ್ರವಲ್ಲ ಎಲ್ಲಾ ಬಗೆಯ ಕ್ರೀಡೆಗಳಲ್ಲಿ ಮಕ್ಕಳು ತೊಡಗಿಸಿಕೊ ಳ್ಳಬೇಕು. ಭವಿಷ್ಯದಲ್ಲಿ ಅಗತ್ಯ ಎನಿಸಿದರೆ ಮಾತ್ರ ಅಕಾಡೆಮಿಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಸದ್ಯ ಮಕ್ಕಳನ್ನು ಮೋಟಿವೇಟ್ ಮಾಡುವುದರಲ್ಲಿ ನನಗೆ ಸಂತೋಷ ಸಿಗುತ್ತಿದೆ ಎಂದು ಅವರು ಹೇಳಿದರು.

ಆಟಗಾರ್ತಿಯ ಮನಸ್ಥಿತಿಯಿಂದ ನಾನು ಇನ್ನಷ್ಟೇ ಹೊರಗೆ ಬರಬೇಕು. ಈಗಷ್ಟೇ ನಾನು ಸಕ್ರಿಯ ಚಟುವಟಿಕೆಯಿಂದ ಹೊರಬಂದಿದ್ದೇನೆ. ಸಾಮಾಜಿಕ ಜಾಲತಾಣ ಬಿಟ್ಟು ಮಕ್ಕಳು ಮೈದಾನದತ್ತ ಬರಬೇಕು. ಹಾಗಾಗಿ ಅವರನ್ನು ಮೋಟಿವೇಟ್ ಮಾಡುವುದರಲ್ಲಿ ನನಗೆ ಸಂತೋಷವಿದೆ ಎಂದ ಅವರು, ಬ್ಯಾಡ್ಮಿಂಟನ್ ಆಟಕ್ಕಾಗಿ ನಾನು ತುಂಬಾ ತ್ಯಾಗ ಮಾಡಬೇಕಾಯಿತು. ಕಳೆದ 25 ವರ್ಷಗಳಿಂದ ಮನೆ, ಸ್ನೇಹಿತರು, ಆಹಾರ ಎಲ್ಲವನ್ನು ಬಿಟ್ಟು ಕ್ರೀಡಾ ಕ್ಷೇತ್ರದಲ್ಲಿದ್ದೇನೆ. ತುಂಬಾ ಒತ್ತಡದ ಜೀವನ ನಡೆಸಿದ್ದೇನೆ ಎಂದರು.

ಪ್ರಕಾಶ್ ಪಡುಕೋಣೆ ಓರ್ವ ಲೆಜೆಂಡ್. ಅವರ ತವರೂರಿಗೆ ಬಂದಿ ರುವುದು ಸಂತೋಷವಾಗಿದೆ. ಅವರಿಂದ ಪ್ರೇರಣೆ ಪಡೆದು ನಾವು ಆಟವಾಡಿದ್ದೇವೆ. ನನ್ನ ಕೋಚ್ ಗೋಪಿಗೂ ಅವರೇ ಪ್ರೇರಣೆ. ಪ್ರಕಾಶ್ ಪಡುಕೋಣೆ ರಿಯಲ್ ಸ್ಟಾರ್. ಅವರ ಬಗ್ಗೆ ಹೆಮ್ಮೆ ಇದೆ. ಈ ಭಾಗದಿಂದ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿರುವ ಚೀರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಶೆಟ್ಟಿ ಭರವಸೆಯ ಆಟಗಾರರಾಗಿದ್ದಾರೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X