ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಕಾರ್ಕಳ, ಅ.14: ಮಾನಸಿಕ ಸಮಸ್ಯೆಯಿಂದ ಅ.3ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳ್ಮಣ್‌ನ ಬ್ಯಾಂಕಿನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಅಶೋಕ ಎಂಬವರು ಅ.14ರಂದು ಬೆಳಗ್ಗಿ ಚಿಕಿತ್ಸೆ ಫಲಕಾರಿ ಯಾಗದೆ ಮುಕ್ಕಾ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೊಳಲಗಿರಿಯ ಶಕುಂತಳ(48) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಅ.14ರಂದು ಬೆಳಗ್ಗೆ ಮನೆಯ ಹಾಲ್‌ನಲ್ಲಿ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ರಪಾಡಿ ಗ್ರಾಮದ ಬಸವ (53) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.13ರಂದು ಮನೆಯ ಹಟ್ಟಿಯ ಪಕ್ಕದಲ್ಲಿರುವ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





