ವೃದ್ಧ ನಾಪತ್ತೆ

ಉಡುಪಿ, ಅ.16: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ನಿವಾಸಿ ಶಂಭು ಪೂಜಾರಿ (80) ಎಂಬವರು ಅಕ್ಟೋಬರ್ 9ರಂದು ಅಪರಾಹ್ನ 1:30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಪೂರ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820- 2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820- 2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9080805445ನ್ನು ಸಂಪರ್ಕಿಸ ಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Next Story





