ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಅಜೆಕಾರು, ಅ.16: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎರ್ಲಪಾಡಿ ಗ್ರಾಮದ ಮೋಹನ್ ದಾಸ್ ಗೌಡ (77) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.15ರಂದು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈಯಕ್ತಿಕ ಕಾರಣದಿಂದ ಮನನೊಂದ ಪುತ್ತೂರು ಗ್ರಾಮದ ಹನುಮಂತ ನಗರ ಪ್ರೌಢಶಾಲೆ ಬಳಿ ನಿವಾಸಿ ಉಮೇಶ ಜಿ.ಶೆಟ್ಟಿ(56) ಎಂಬವರು ಅ.16ರಂದು ಬೆಳಗ್ಗೆ ಮನೆಯ ಹಾಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





