ಹೆಜಮಾಡಿ ಬಳಿ ಲಾರಿ ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು

ಮಹಮ್ಮದ್ ರಫೀಕ್
ಪಡುಬಿದ್ರಿ, ನ.17: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಹೆಜಮಾಡಿ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ಮಹಮ್ಮದ್ ರಫೀಕ್(57) ಎಂದು ಗುರುತಿಸಲಾಗಿದೆ. ಇವರು ಮನೆ ಯಿಂದ ಮಸೀದಿಗೆ ರಿಕ್ಷಾದಲ್ಲಿ ಹೋಗುತ್ತಿದ್ದಾಗ ಮಂಗಳೂರು ಕಡೆಯಿಂದ ಬಂದ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಫೀಕ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರಂದು ತಿಳಿದು ಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





