ಸಹಾಯಧನ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಅ.17: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ರೇಷ್ಮೆ ನೂಲು ಬಿಚ್ಚಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರ ಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಿಗೆ ಸಾಲ ಸಹಾಯಧನ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.21ರವರೆಗೆ ವಿಸ್ತರಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯ ಹತ್ತಿರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820- 2574990, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ. ಸಂಖ್ಯೆ:08258-231101 ಹಾಗೂ ಕುಂದಾಪುರ ತಾಲೂಕು ದೂ.ಸಂಖ್ಯೆ: 08254-230370 ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.







