ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಉಡುಪಿ, ಅ.19: ಉಡುಪಿ ಜಿಲ್ಲೆಯ ವಿವಿಧೆಡೆ ರವಿವಾರ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಉಡುಪಿ ನಗರ, ಪಡುಬಿದ್ರಿ, ಎರ್ಮಾಳು, ಉಚ್ಚಿಲ, ಕಾಪು, ಹೆಜಮಾಡಿ ಪರಿಸರದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಕಾಪು ಬೀಡುಬದಿ ಲಕ್ಷ್ಮಿ ನಗರ ಎಂಬಲ್ಲಿ ಶಾಂತರಾಮ ಎಂಬವರ ಮನೆಗೆ ಸಿಡಿಲು ಬಡಿದ ಪರಿಣಾಮ ಅಪಾರ ಸೊತ್ತುಗಳು ಹಾನಿಯಾಗಿವೆ.
Next Story





