ಜಾತಿ ನಿಂದನೆ, ಜೀವ ಬೆದರಿಕೆ ಆರೋಪ: ಪ್ರಕರಣ ದಾಖಲು

ಕೋಟ, ಅ.20: ಸಾಲ ಮರುಪಾವತಿಸದಿದ್ದಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆದೂರು ಗ್ರಾಮದ ಗೋಪಾಲ ಎಂಬವರು ಕೃಷ್ಣಮೂರ್ತಿ ಎಂಬವ ರೊಂದಿಗೆ ಸಾಲ ಪಡೆದುಕೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಗೋಪಾಲ ಅವರಿಗೆ ಸಾಲವನ್ನು ಹಿಂದಿರುಗಿಸಲು ಸಾಧ್ಯವಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ ಅ.19ರಂದು ಸಂಜೆ ಗೋಪಾಲ ಅವರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ಸಾಲದ ಹಣ ಬಡ್ಡಿ ಮತ್ತು ಚಕ್ರ ಬಡ್ಡಿ ಸಮೇತ ನೀಡದಿದ್ದರೆ, ರೌಡಿಗಳಿಗೆ ಹೇಳಿ ಕಾಲು ಮುರಿಯುತ್ತೇನೆ ಎಂಬುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.
Next Story





