Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ20 Oct 2025 7:50 PM IST
share
ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ಉಡುಪಿ, ಅ.20: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿ ಸುವಂತೆ ಪ್ರೋತ್ಸಾಹಿಸಲು ಬಾಲ ಪ್ರತಿಭೆ (8 ವರ್ಷದಿಂದ 14 ವರ್ಷದಒಳಗಿನ), ಕಿಶೋರ ಪ್ರತಿಭೆ (14ವರ್ಷದಿಂದ 18 ವರ್ಷದೊಳಗಿನ) ಹಾಗೂ ಯುವಪ್ರತಿಭೆ (18 ವರ್ಷದಿಂದ 30 ವರ್ಷದ ಒಳಗಿನ) ಗಳಿಗೆ ಕಲಾಪ್ರತಿಭೋತ್ಸ ವವನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಸ್ಪರ್ಧೆಯು ನಡೆಯುವ ದಿನಾಂಕವನ್ನು ಮುಂದೆ ತಿಳಿಸಲಾ ಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿ ಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡುವುದರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ವಲಯ ಮಟ್ಟಕ್ಕೆ, ವಲಯ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾ ಗುವುದು.

ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ತಾವು ವ್ಯಾಸಂಗ ಮಾಡುತ್ತಿ ರುವ ವಿದ್ಯಾ ಸಂಸ್ಥೆಯಿಂದ ಪಡೆದು ಅರ್ಜಿಯ ಜೊತೆಗೆ (ಅರ್ಜಿಗೆ ಬಿಳಿಹಾಳೆಯಲ್ಲಿ ಸ್ವವಿವರಗಳನ್ನು ಬರೆದಿರಬೇಕು.) ಲಗತ್ತಿಸಬೇಕು. ಚಿತ್ರಕಲಾ ಸ್ಪರ್ಧಿಗಳು ತಮಗೆ ಬೇಕಾದ ಬಣ್ಣ ಇತ್ಯಾದಿಗಳನ್ನು ತಾವೇ ತರುವುದು. ನೃತ್ಯ ಪ್ರದರ್ಶನವನ್ನು ಲೈವ್ ಅಥವಾ ರೆಕಾರ್ಡ್ ಮೂಲಕ ಪ್ರದರ್ಶಿಸಬಹುದು (ಸ್ಪರ್ಧಿಗಳು ಪೆನ್ ಡ್ರೈವ್ ಅಥವಾ ಸಿ.ಡಿ.ಯನ್ನು ತಾವೇ ತರಬೇಕು).ಒಬ್ಬರಿಗೆ ಒಂದು ಕಲಾ ಪ್ರಕಾರ ದಲ್ಲಿ ಮಾತ್ರ ಸ್ಪರ್ಧಿಸಲು ಅವಕಾಶವಿರುತ್ತದೆ.

ಶಾಲಾ ಮುಖ್ಯಸ್ಥರು ತಮ್ಮ ಶಾಲೆಗಳ ಮೂಲಕ ಸ್ಪರ್ಧಿಗಳು ಅರ್ಜಿ ಸಲ್ಲಿಸುವಾಗ ಪ್ರತಿ ಪ್ರಕಾರ (ಸಂಗೀತ, ನೃತ್ಯ ಇತರೆ) ಹಾಗೂ ಪ್ರತಿ ವಿಭಾಗದ ಸ್ಪರ್ಧಿಗಳ ಜನ್ಮ ದಿನಾಂಕವನ್ನು ದೃಢೀಕರಿಸಿ, ಪಟ್ಟಿಯನ್ನು ಪ್ರತ್ಯೇಕವಾಗಿ ಕಳುಹಿಸಬೇಕು. ಖಾಸಗಿ ಸ್ಪರ್ಧಿಯಾಗಿದ್ದಲ್ಲಿ ಶಾಲಾ ಕಾಲೇಜಿನ ಜನ್ಮ ದಿನಾಂಕ ದೃಢೀಕರಣ ಪತ್ರ ಅಥವಾ ಪಂಚಾಯಿತಿ, ಪುರಸಭೆ, ನಗರಸಭೆಗಳಿಂದ ನೀಡುವ ಜನನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ರಾಜ್ಯಮಟ್ಟದ ಸ್ಪರ್ಧಿಗಳಲ್ಲಿ ಪ್ರತಿ ಪ್ರಕಾರದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನವಾಗಿ ತಲಾ ರೂ. 15,000, ರೂ. 10,000, ರೂ. 7,500 ನಗದು ಹಾಗೂ ಪ್ರಮಾಣ ಪತ್ರ ನೀಡಲಾ ಗುತ್ತದೆ. ಯುವ ಪ್ರತಿಭೆ ಸ್ಪರ್ಧೆಯ ಸಮೂಹ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಇದ್ದು, ಗರಿಷ್ಠ 15ನ್ನು ಮೀರಬಾರದು.

ರಾಜ್ಯಮಟ್ಟದ ಅಂತಿಮ ಸಮೂಹ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಸ್ಪರ್ಧಿಗಳಿಗೆ (ತಂಡಕ್ಕೆ) ಕ್ರಮವಾಗಿ ರೂ.50000, ರೂ.40000 ಹಾಗೂ ರೂ.30000 ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಬಾಲಪ್ರತಿಭೆ/ ಕಿಶೋರ ಪ್ರತಿಭೆ - ಏಕ ವ್ಯಕ್ತಿ ಸ್ಪರ್ಧೆಯ ಕಲಾ ಪ್ರಕಾರಗಳ ವಿವರ: ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದ ಗೀತೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ.

ಯುವಪ್ರತಿಭೆ ಸ್ಪರ್ಧೆಯ ಏಕವ್ಯಕ್ತಿ ಕಲಾ ಪ್ರಕಾರಗಳ ವಿವರ: ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ), ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ನಾಟಕ.

ಮೇಲಿನಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಅರ್ಜಿಯನ್ನು ಅಕ್ಟೋಬರ್ 30ರ ಸಂಜೆ 5 ಗಂಟೆಯ ಒಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ, ಇವರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820- 2986168 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X