ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಅ.21: ಮಲ್ಪೆ ಬಂದರಿನಲ್ಲಿ ಬೋಟಿನಿಂದ ಅಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ಒರಿಸ್ಸಾ ಮೂಲದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಓಡಿಸ್ಸಾ ರಾಜ್ಯದ ಆದಿಯಾ ಮುಂಡಾ(24) ಎಂದು ಗುರುತಿಸಲಾಗಿದೆ. ಇವರು ಶ್ರೀ ವಿರಾಂಜನೇಯ ಹೆಸರಿನ ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅ.20ರಂದು ದಕ್ಕೆಯಲ್ಲಿ ನಿಲ್ಲಿಸಿದ್ದ ಬೋಟಿನ ಬಲೆಯ ಮೇಲೆ ಕುಳಿತುಕೊಂಡು ಉಟ ಮಾಡುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಧಕ್ಕೆಯ ನೀರಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





