Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗೋವಾದಲ್ಲಿ ಅಪೂರ್ವ ಗಜಲಕ್ಷ್ಮಿಯ...

ಗೋವಾದಲ್ಲಿ ಅಪೂರ್ವ ಗಜಲಕ್ಷ್ಮಿಯ ಶಿಲ್ಪಪತ್ತೆ

ವಾರ್ತಾಭಾರತಿವಾರ್ತಾಭಾರತಿ23 Oct 2025 8:35 PM IST
share
ಗೋವಾದಲ್ಲಿ ಅಪೂರ್ವ ಗಜಲಕ್ಷ್ಮಿಯ ಶಿಲ್ಪಪತ್ತೆ

ಉಡುಪಿ, ಅ.23: ಗೋವಾದ ಪರ್ಯೆ ಸಮೀಪದ ವಲವಂತಿ ನದಿಯಲ್ಲಿ ಆಕಸ್ಮಿಕವಾಗಿ ಪತ್ತೆಯಾದ ಗಜಲಕ್ಷ್ಮಿ ಶಿಲ್ಪ, ಚಾರಿತ್ರಿಕ ಮಹತ್ವವನ್ನು ಹೊಂದಿದೆ ಅಪೂರ್ವವಾದ ವಿಗ್ರಹವೆಂದು ಪುರಾತತ್ವ ಶಾಸ್ತ್ರಜ್ಞ ಹಾಗೂ ಉಡುಪಿಯ ಅದಿಮ ಕಲಾಟ್ರಸ್ಟ್‌ನ ಸ್ಥಾಪಕ ಸಂಚಾಲಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.

ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈ ಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರ ಕುಂಡಲಗಳಿವೆ. ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯ ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ.

ಗಂಡಭೇರುಂಡ ಲತಾಕೋಷ್ಟಕ: ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ ಮುಂತಾದ ಆಭರಣಗಳಿಂದ ಆಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡ ಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ.

ಚಾರಿತ್ರಿಕ ಮಹತ್ವ: ಗೋವಾದ ದೇವರ ಕಾಡುಗಳು ಹಾಗೂ ಕೆಲವು ದೇವಾಲಯಗಳ ಹೊರ ಆವರಣದಲ್ಲಿ ಕೆಲವು ಗಜಲಕ್ಷ್ಮಿ ಶಿಲ್ಪಫಲಕಗಳನ್ನು ಕಾಣಬಹುದಾಗಿದೆ. ಇದರಲ್ಲಿ ಬಹುತೇಕ ಶಿಲ್ಪಗಳಲ್ಲಿ ಗಜಲಕ್ಷ್ಮಿಯ ಶಿಲ್ಪದ ಜೊತೆಗೆ ಯುದ್ಧದ ಚಿತ್ರಣಗಳು ಇವೆ ಹಾಗೂ ಗಜಲಕ್ಷ್ಮಿಯನ್ನು ಬುಡಕಟ್ಟು ಶೈಲಿಯಲ್ಲಿ ಚಿತ್ರಿಸಲಾಗಿದೆ. ಆದ್ದರಿಂದ, ಅವುಗಳು ದೇಶಿ ಶೈಲಿಯ ಗಜಲಕ್ಷ್ಮಿಯ ಶಿಲ್ಪಗಳು.

ಆದರೆ, ಈಗ ಅಧ್ಯಯನಕ್ಕೆ ಒಳಪಡಿಸಿರುವ ಶಿಲ್ಪವು ಮಾರ್ಗ ಸಂಪ್ರದಾಯಕ್ಕೆ ಸೇರಿದ ಶಿಲ್ಪವಾಗಿದೆ. ಗಂಡ ಭೇರುಂಡದ ಸಾಂಕೇತಿಕ ಚಿತ್ರಣವು ಅತ್ಯಂತ ಸ್ಪಷ್ಟವಾಗಿ ಈ ಶಿಲ್ಪವು ಗೋವಾದ ವೈಷ್ಣವ ಸಂಪ್ರದಾಯಕ್ಕೆ ಸೇರಿದ ಶಿಲ್ಪವೆಂದು ಖಚಿತಪಡಿಸುತ್ತದೆ. ಗಂಡಭೇರುಂಡ ಶಿಲ್ಪವು ಕದಂಬ, ವಿಜಯನಗರ, ಮೈಸೂರಿನ ಒಡೆಯರ್ ಹಾಗೂ ಪ್ರಸ್ತುತ ಕರ್ನಾಟಕ ಸರಕಾರದ ರಾಜ ಲಾಂಛನವಾಗಿದೆ.

ನದಿಯಲ್ಲಿದ್ದ ಈ ಶಿಲ್ಪವನ್ನು ಗಮನಿಸಿ ರಕ್ಷಿಸಿದ ಉಡುಪಿಯ ಅದಿಮ ಕಲಾ ಟ್ರಸ್ಟ್‌ನ ಅಧ್ಯಕ್ಷ ಗೋವಾದ ಡಾ. ರಾಜೇಂದ್ರ ಕೇರ್ಕರ್ ಅವರಿಗೆ ತಾವು ಕೃತಜ್ಞರಾಗಿರುವುದಾಗಿ ಪ್ರೊ.ಮುರುಗೇಶಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X