ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬ್ರಹ್ಮಾವರ: ಜಮೀಯ್ಯತುಲ್ ಫಲಾಹ್ ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಝಕಾತ್ ಸ್ವೀಕರಿಸುವ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ, ಪ್ರಥಮ ವರ್ಷದ ಪದವಿ, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ಡಿಪ್ಲೊಮೊ, ವೃತ್ತಿ ಪರ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ. ಕೈ ಬರಹದಲ್ಲಿ ಅರ್ಜಿ ಬರೆದು ಅದರೊಂದಿಗೆ, ಕಳೆದ ವರ್ಷದ ಅಂಕ ಪಟ್ಟಿ (ಶೇ.50 ಅಂಕ ಹೊಂದಿರಬೇಕು), ಆಧಾರ್ ಕಾರ್ಡ್ ನಕಲು ಪ್ರತಿ, ಹಾಗೂ ಮೊಬೈಲ್ ಸಂಖ್ಯೆ ಇತ್ಯಾದಿ ನಮೂದಿಸಿ, ದಿನಾಂಕ ನ.5ರೊಳಗೆ ಕೆನರಾ ಫುಟ್‌ವೇರ್, ಬಸ್ ಸ್ಟ್ಯಾಂಡ್ ಬಳಿ, ಬ್ರಹ್ಮಾವರ 576213 ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ-9731531966, 9448216862, 9845884031ಕ್ಕೆ ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





