ಮರವಂತೆ: ಕ್ಯಾನ್ಸರ್ ತಪಾಸಣಾ ಶಿಬಿರ

ಕುಂದಾಪುರ, ಅ.27: ಮರವಂತೆ ಸಾಧನಾ ಸಮಾಜ ಸೇವಾ ವೇದಿಕೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಮರವಂತೆ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಶಿಬಿರವನ್ನು ಮರವಂತೆ ಸಾಧನಾ ಸಮಾಜ ಸೇವಾ ಸಂಘದ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ಉದ್ಘಾಟಿಸಿದರು. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಗಣೇಶ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಯಾಗಿ ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ ಪಟಗಾರ ಶುಭಾಶಯದ ನುಡಿಗಳನ್ನಾಡಿದರು. ಕೆಎಂಸಿ ಸ್ತ್ರೀ ರೋಗ ವಿಭಾಗದ ಡಾ.ಅವಿಷಾ ಮತ್ತು ಡಾ.ಅನುಷಾ ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿ, ಸಾಧನಾ ವೇದಿಕೆಯ ಸದಸ್ಯರು, ಸ್ಥಳೀಯ ಸ್ತ್ರೀ ಶಕ್ತಿ ಸಂಘ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮರವಂತೆ ಒಕ್ಕೂಟದ ಪದಾಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಶಿಬಿರದಲ್ಲಿ 175ಕ್ಕೂ ಹೆಚ್ಚು ಜನರು ಪ್ರಯೋಜನವನ್ನು ಪಡೆದುಕೊಂಡರು.
ಹರೀಶ್ ಗೌಡ ಸ್ವಾಗತಿಸಿ, ದೇವಿದಾಸ್ ಶ್ಯಾನುಭಾಗ್ ವಂದಿಸಿ, ಭಾಗ್ಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿದರು







