ಕೃಷ್ಣ ಮಠದಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಉಡುಪಿ, ಅ.27: ಉಡುಪಿ ಕೃಷ್ಣಮಠದ ಬಡಗುಮಾಳಿಗೆಯ ಎರಡನೆ ಮಹಡಿಯಲ್ಲಿ ರವಿವಾರ ರಾತ್ರಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಮುರಳೀಧರ ರಾವ್(65) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ಇವರು ಬೆಳಿಗ್ಗೆ ಪ್ರಜ್ಞಾ ಹೀನಸ್ಥಿತಿಯಲ್ಲಿ ಇರುವುದನ್ನು ಕಂಡ ಮಠದ ಕಾರ್ಮಿಕರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ತಕ್ಷಣ ಒಳಕಾಡು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದು, ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇವರು ಸುಮಾರು ವರ್ಷಗಳಿಂದ ಮಠದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
Next Story





