Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ಸರಕಾರಿ ಕಚೇರಿ, ನ್ಯಾಯಾಲಯ...

ಕುಂದಾಪುರ ಸರಕಾರಿ ಕಚೇರಿ, ನ್ಯಾಯಾಲಯ ಆವರಣದಲ್ಲಿ ಬೀದಿನಾಯಿಗಳ ಹಾವಳಿ!

ವಾರ್ತಾಭಾರತಿವಾರ್ತಾಭಾರತಿ28 Oct 2025 9:06 PM IST
share
ಕುಂದಾಪುರ ಸರಕಾರಿ ಕಚೇರಿ, ನ್ಯಾಯಾಲಯ ಆವರಣದಲ್ಲಿ ಬೀದಿನಾಯಿಗಳ ಹಾವಳಿ!

ಕುಂದಾಪುರ, ಅ.28: ಪ್ರತಿನಿತ್ಯ ಸಾವಿರಾರು ಜನರು ಆಗಮಿಸುವ ಕುಂದಾಪುರ ನ್ಯಾಯಾಲಯ, ತಾಲೂಕು ಕಚೇರಿ, ಪೊಲೀಸ್ ಠಾಣೆಗಳು ಸಹಿತ ವಿವಿಧ ಸರಕಾರಿ ಕಚೇರಿಗಳ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಜನ ಆತಂಕ ಪಡುವಂತಾಗಿದೆ.

ಇಲ್ಲಿನ ನೂತನ ಬಸ್ ನಿಲ್ದಾಣದ ಅನತಿ ದೂರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕುಂದಾಪುರ ತಾಲೂಕು ಆಡಳಿತ ಸೌಧ, ಪೊಲೀಸ್ ನಗರ ಠಾಣೆ, ಸಂಚಾರ ಠಾಣೆ, ಸರ್ವೇ ಕಚೇರಿ ಸಹಿತ ವಿವಿಧ ಇಲಾಖೆಗಳ ಕಚೇರಿಗಳು, ಹಳೆ ಐಬಿ, ದೇವಾಲಯಗಳಿವೆೆ. ನಿತ್ಯ ಕೋರ್ಟು-ಕಚೇರಿ ಕೆಲಸದ ನಿಮಿತ್ತ ಸಾವಿರಾರು ಮಂದಿ ಆಗಮಿಸುವ ಪ್ರಮುಖ ಕೇಂದ್ರ ಸ್ಥಾನ ಇದಾಗಿದ್ದು, ಇಲ್ಲಿಗೆ ಸನಿಹದಲ್ಲಿರುವ ಪಂಚಗಂಗಾವಳಿ ನದಿ ಸೊಬಗು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಾರೆ.

ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಬೀದಿ ನಾಯಿ ಹಾವಳಿ ಜಾಸ್ಥಿಯಾಗಿದೆ. 10-15 ನಾಯಿಗಳು ಗುಂಪು ಗುಂಪಾಗಿ ಓಡಾಡುವುದು, ದಾರಿ ಹೋಕರಿಗೆ ಉಪದ್ರವ ನೀಡುವುದು, ವಾಹನಗಳಿಗೆ ಅಡ್ಡಲಾಗಿ ಬಂದು ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಬೀದಿನಾಯಿಗಳ ಸಮಸ್ಯೆ ಪುರಸಭೆಯ ಹಲವು ಸಾಮಾನ್ಯ ಸಭೆಗಳಲ್ಲಿಯೂ ಪ್ರಸ್ತಾಪವಾಗಿದೆ. ಆದರೆ ಯಾವುದೇ ಕ್ರಮವಾಗಿಲ್ಲ. ಬಗ್ಗೆ ಸಂಬಂದಪಟ್ಟವರು ತಕ್ಷಣ ಎಚ್ಚೆತ್ತುಕೊಂಡು ಸೂಕ್ತ ಕ್ರಮವಹಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

‘ಬೀದಿನಾಯಿಗಳ ಸಮಸ್ಯೆ ಕುರಿತು ದೂರುಗಳು ಬಂದಿದೆ. ಕಳೆದ ವರ್ಷ 402 ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿ, ಲಸಿಕೆ ಹಾಕಿಸಲಾಗಿದೆ. ಈ ವರ್ಷವೂ 400-500 ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿ ಸಲು ಬಜೆಟ್ನಲ್ಲಿಟ್ಟಿದ್ದು ಟೆಂಡರ್ ಪ್ರಕ್ರಿಯೆಯಲ್ಲಿದೆ. ’ಎಬಿಸಿ’ ಕಾರ್ಯಕ್ರಮದಡಿ ಸಂತಾನಹರಣ ಚಿಕಿತ್ಸೆ ನೀಡಬೇಕಿ ರುವ ಕಾರಣ ಪ್ರಕ್ರಿಯೆ ವಿಳಂಭವಾಗುತ್ತಿದೆ. ಜನರಿಗೆ ಸಮಸ್ಯೆಯಾಗದಂತೆ ನಿಯಮಾನುಸಾರ ಕ್ರಮವಹಿಸುತ್ತೇವೆ’ ಎಂದು ಕುಂದಾಪುರ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ನಾಯ್ಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X