Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಂಡ್ಸೆ ಗ್ರಾಪಂ ಕಾರ್ಯ ಇಡೀ ರಾಜ್ಯಕ್ಕೆ...

ವಂಡ್ಸೆ ಗ್ರಾಪಂ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ31 Oct 2025 9:22 PM IST
share
ವಂಡ್ಸೆ ಗ್ರಾಪಂ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ನಿರಾಮಯ ಸೊಸೈಟಿ ಸಮುದಾಯ ಉಪಶಮನ ಆರೈಕೆ ಕೇಂದ್ರಕ್ಕೆ ಚಾಲನೆ

ಕುಂದಾಪುರ, ಅ.31: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ನಿರಾಮಯ ಸೊಸೈಟಿ ಮೂಲಕ ಅನುಷ್ಠಾನಗೊಳ್ಳುತ್ತಿರುವ ‘ಸಮುದಾಯ ಉಪ ಶಮನ ಆರೈಕೆ ಕೇಂದ್ರ’ ವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಹಾಗೂ ಅಂಬುಲೆನ್ಸ್ ಮತ್ತು ಶೀತಲೀಕರಣ ಪೆಟ್ಟಿಗೆ ಹಸ್ತಾಂತರಿಸಿ ಅವರು ಮಾತನಾಡುತಿದ್ದರು.

ಪ್ರತಿಯೊಬ್ಬರು ಸಮಾಜ ಸೇವೆ ಮಾಡುವ ಮನೋಭಾವ ಬೆಳೆಸಿ ಕೊಳ್ಳಬೇಕು. ಸಮಾಜ ಸೇವಕರು ಸಮಾಜಕ್ಕೆ, ರಾಜ್ಯಕ್ಕೆ, ದೇಶಕ್ಕೆ ಆದರ್ಶ ರಾಗುತ್ತಾರೆ. ಆರೈಕೆ ಕೇಂದ್ರದ ಮೂಲಕ ವಂಡ್ಸೆ ಗ್ರಾಮ ಪಂಚಾಯತಿ ಸಮಾಜ ಸೇವೆ ಮಾಡುತ್ತಿದೆ ಎಂದರು.

ಜೊತೆಗೆ ವಂಡ್ಸೆ ಗ್ರಾಪಂನ ಮಾದರಿ ಘನತಾಜ್ಯ ಘಟಕ ಲಾಭವನ್ನು ಮಾಡುತ್ತಿದ್ದು, ಇದರಿಂದ ಕಸದಿಂದ ರಸ ಮಾಡುತ್ತಿದೆ. ವಂಡ್ಸೆ ಗ್ರಾಪಂನ ಕಾರ್ಯವನ್ನು ಬೇರೆ ಇತರ ಗ್ರಾಮ ಪಂಚಾಯತಿಗಳು ಬಂದು ನೋಡಬೇಕು. ನಮ್ಮ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರನ್ನು ಇಲ್ಲಿಗೆ ಕಳುಹಿಸುವೆ. ಈ ಮಾದರಿ ನಮ್ಮೂರಲ್ಲೂ ಆಗಬೇಕು ಎಂಬುದೆ ನನ್ನ ಆಶಯವಾಗಿದೆ ಎಂದರು.

ನಿರಾಮಯ ಸೊಸೈಟಿ ಅಧ್ಯಕ್ಷ ಉದಯ್‌ಕುಮಾರ ಶೆಟ್ಟಿ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆರ್ಹರು. ಮುಂದಿನ ವರ್ಷಕ್ಕೆ ಅವರಿಗೆ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ ಎಂಬುದೇ ನನ್ನ ಆಶಯ. ಈ ಸೇವೆ ನಿರಂತರವಾಗಿ ನಡೆಯಲಿ, ಅಧಿಕಾರ ಶಾಶ್ವತ ಅಲ್ಲ, ನಾವು ಮಾಡುವ ಕೆಲಸ ಕಾರ್ಯಗಳು ಶಾಶ್ವತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇದೇ ಸಂದರ್ಭ ದಾನಿಗಳಾದ ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ, ನಾಗರಾಜ ಮಂಜ ಮಾರಣಕಟ್ಟೆ ಮತ್ತು ಡಾ.ರಾಜೇಶ ಬಾಯರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ವಿವಿಧ ಗ್ರಾಪಂ ಅಧ್ಯಕ್ಷರಾದ ಆಶಾ ಆಚಾರ್ಯ, ಜ್ಯೋತಿ, ಶಕೀಲಾ, ಸುದರ್ಶನ ಶೆಟ್ಟಿ, ರಾಜೇಶ ಎನ್.ದೇವಾಡಿಗ, ದಿವಾಕರ ಆಚಾರ್ಯ, ಜಿಪಂ ಯೋಜನಾ ನಿರ್ದೇಶಕ ವಿಜಯ ಕುಮಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕೆ.ಜಿ., ಎಂ.ದಿನೇಶ ಹೆಗ್ಡೆ ಮೊಳಹಳ್ಳಿ, ಡಾ.ಅತುಲ್ ಕುಮಾರ್ ಶೆಟ್ಟಿ, ಮೋಹನ ಎಲ್.ಎಚ್., ನವೀನ್ ಬಾಗಲಕೋಟೆ, ರೋಶಿನಿ ಶೆಟ್ಟಿ ಅಂಪಾರು, ಮುನಿಯಾಲು ಉದಯಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನಿರಾಮಯ ಸೊಸೈಟಿ ಅಧ್ಯಕ್ಷ ಉದಯ್ ಕುಮಾರ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X