ಎಲ್ಲೂರು: ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಉದ್ಘಾಟನೆ

ಕಾಪು, ನ.1: ಉಡುಪಿ ಜಿಪಂ ಹಾಗೂ ತಾಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಕಾಪು ತಾಲೂಕಿನ ಎಲ್ಲಾ ಗ್ರಾಪಂಗಳು ಹಾಗೂ ಕಾಪು ತಾಲೂಕು ತ್ಯಾಜ್ಯ ನಿರ್ವಹಣಾ ಸಹಕಾರ ಸಂಘದ ವತಿಯಿಂದ ಎಲ್ಲೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
ಸಮಾರಂಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಪು ಪುರಸಭೆಯ ಅಧ್ಯಕ್ಷ ಹರಿಣಾಕ್ಷಿ, ಎಲ್ಲೂರು ಗ್ರಾಪಂ ಅಧ್ಯಕ್ಷ ರವಿರಾಜ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
Next Story





