Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾನು ಸಾಮಾನ್ಯ ಕಾರ್ಯಕರ್ತೆ; ಪಕ್ಷ...

ನಾನು ಸಾಮಾನ್ಯ ಕಾರ್ಯಕರ್ತೆ; ಪಕ್ಷ ಹೇಳಿದಂತೆ ನಡೆಯುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ1 Nov 2025 8:34 PM IST
share
ನಾನು ಸಾಮಾನ್ಯ ಕಾರ್ಯಕರ್ತೆ; ಪಕ್ಷ ಹೇಳಿದಂತೆ ನಡೆಯುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ನ.1: ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆ. ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಸಚಿವ ಸಂಪುಟದಲ್ಲಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನನ್ನ ಸಹಿತ ಎಲ್ಲರೂ ಪಕ್ಷ ಹೇಳಿದ್ದನ್ನು ಕೇಳುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ. ಪಕ್ಷ ನನ್ನನ್ನು ಗುರುತಿಸಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಕೆಲಸ ಬೇರೆ ಇದೆ ಎಂದು ಪಕ್ಷ ಸೂಚಿಸಿದರೆ ಸಂತೋಷದಿಂದ ಅದನ್ನು ಕೇಳುತ್ತೇವೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಸೋನಿಯಾ ಗಾಂಧಿ ಅವರ ತ್ಯಾಗದ ಮಾತನ್ನು ಬಹಳಷ್ಟು ಸಾರಿ ಹೇಳಿದ್ದಾರೆ. ಇದಕ್ಕೆ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ. ಗಾಂಧಿ ಪರಿವಾರದ ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ ಎಂದು ಸಚಿವೆ ನುಡಿದರು.

ನವೆಂಬರ್ ಕ್ರಾಂತಿ ಎಂಬುದು ಬರೇ ಭ್ರಾಂತಿಯಷ್ಟೇ ಎಂದಿರುವ ಸಚಿವ ಹೆಚ್.ಸಿ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ, ಅವರು ನಮ್ಮ ಪಕ್ಷದ ಹಿರಿಯ ಮುಖಂಡರು, ಸಂಪುಟದಲ್ಲಿ ಅತ್ಯಂತ ಬುದ್ಧಿವಂತ ಮಂತ್ರಿ. ಅವರೇನು ಹೇಳಿದರೂ ಅದನ್ನು ನಾನು ಬೆಂಬಲಿಸುತ್ತೇನೆ ಎಂದರು.

ಬೆಂಬಲ ಇಲ್ಲ: ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ, ಪ್ರತ್ಯೇಕ ಧ್ವಜ ಹಾರಿಸಿದವರಿಗೆ ನನ್ನ ಬೆಂಬಲ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟವಾಗಿ ನುಡಿದರು.

ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು. ಪ್ರತ್ಯೇಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲ ಮಾಡಲ್ಲ. ಕರ್ನಾಟಕದ ಏಕೀಕರಣಕ್ಕೆ ಹಿರಿಯರು, ಸಾಹಿತಿಗಳು ಹೋರಾಟ ಮಾಡಿದ್ದಾರೆ. ಈ ಸುಸಂದರ್ಭದಲ್ಲಿ ಈ ಬೆಳವಣಿಗೆಗಳ ಬಗ್ಗೆ ನಾನು ಮಾತಾಡಲ್ಲ. ಈ ಬೆಳವಣಿಗೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು.

ಕೀಳು ಮಟ್ಟದ ಮಾತು ನಿಲ್ಲಿಸಿ: ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್‌ಸಿಂಹ ನಡುವಿನ ಮಾತಿನ ಸಮರದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಅಕ್ಕನ ಸ್ಥಾನದಲ್ಲಿ ನಿಂತು ಇಬ್ಬರಿಗೂ ಕಿವಿಮಾತು ಹೇಳುತ್ತೇನೆ. ನನ್ನ ವಿಚಾರದಲ್ಲೂ ಬಹಳಷ್ಟು ಅಪಮಾನಗಳನ್ನು ಅನುಭವಿ ಸಿದ್ದೇನೆ. ರಾಜಕಾರಣಿಗಳನ್ನು ಜನ ಗಮನಿಸುತ್ತಿದ್ದಾರೆ. ನಾವು ರೋಲ್ ಮಾಡೆಲ್ ಆಗಬೇಕೆ ಹೊರತು ಜನ ನಾಚಿಕೆ ಪಡುವಂತೆ ವರ್ತಿಸಬಾರದು ಎಂದರು.

ನಿಮ್ಮ ಆಚಾರ ವಿಚಾರ ಭಾಷೆಯನ್ನು ಜನ ನೋಡುತ್ತಾರೆ. ಈ ವಿಚಾರದಲ್ಲಿ ನಿಮ್ಮ ತಂದೆ ತಾಯಿಯನ್ನು ಎಳೆಯು ವುದು ಸರಿಯಲ್ಲ, ಇಲ್ಲಿಗೆ ಬಿಟ್ಟುಬಿಡಿ. ಇಬ್ಬರೂ ಬುದ್ಧಿವಂತರಿದ್ದೀರಿ, ಸಾಕು ಇಲ್ಲಿಗೇ ಬಿಟ್ಟುಬಿಡಿ ಎಂದು ಸಚಿವೆ ಲಕ್ಷ್ಮೀ ಕಿವಿಮಾತು ಹೇಳಿದರು.

ಧರ್ಮಸ್ಥಳ ಕೇಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಕೋರ್ಟ್ ನಿರ್ಬಂಧನೆಯನ್ನು ಹೇರಿದೆ. ಕೋರ್ಟ್ ಆದೇಶವನ್ನು ನಾವು ಪಾಲಿಸಬೇಕು, ಪಾಲಿಸುತ್ತಿದ್ದೇವೆ. ಸರ್ಕಾರಕ್ಕೆ, ತನಿಖೆಗೆ ಹಿನ್ನಡೆ ಆಗಿದೆ ಎಂಬ ಚರ್ಚೆ ಸರಿಯಲ್ಲ. ತಡೆಯಾಜ್ಞೆಯನ್ನು ತೆರವು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಸತ್ಯ ಹೊರಬರಬೇಕು ಅಷ್ಟೇ. ಧರ್ಮಸ್ಥಳ ಪವಿತ್ರ ಕ್ಷೇತ್ರ ಎಂಬ ಸಂದೇಶ ಹೊರಗೆ ಬರಬೇಕು ಎಂದರು.

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೂರ್ಣ ಸಹಕಾರ ಕೊಡುತ್ತದೆ. ಪ್ರತಿ ಶಾಸಕರಿಗೆ 25ಕೋಟಿ ಅನುದಾನವನ್ನು ವಿಶೇಷ ಅನುದಾನದ ಅಡಿಯಲ್ಲಿ ಬಿಡುಗಡೆ ಮಾಡಿದ್ದೇವೆ. ಜೊತೆಗೆ ಪ್ರಗತಿ ಪಥ ಎಂಬ ಪ್ರತಿ ವಿದಾನಸಭಾ ಕ್ಷೇತ್ರಕ್ಕೆ ಆರ್‌ಡಿಪಿಆರ್‌ನಲ್ಲಿ 32 ಕಿ.ಮೀ. ಪ್ರಗತಿ ಪಥವನ್ನು ಕೂಡಾ ನೀಡುತಿದ್ದೇವೆ. ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರಕ್ಕೆ ಸಂಪನ್ಮೂಲದ ಕೊರತೆ ಇಲ್ಲ, ಸರಾಗವಾಗಿ ಸಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X