ರೆಡ್‌ಕ್ರಾಸ್‌ನಿಂದ ವಿದ್ಯಾರ್ಥಿಗಳಿಗೆ ಜೂನಿಯರ್ ರೆಡ್‌ಕ್ರಾಸ್ ಪರೀಕ್ಷೆ

ಉಡುಪಿ, ಡಿ.17: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಜೂನಿಯರ್ ರೆಡ್‌ಕ್ರಾಸ್ ಘಟಕವನ್ನು ಹೊಂದಿದೆ. ಪ್ರತೀ ವರ್ಷ ರಾಜ್ಯದಾದ್ಯಂತ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಶಾಖೆಯು ಜೂನಿಯರ್ ರೆಡ್‌ಕ್ರಾಸ್ ಪರೀಕ್ಷೆಯನ್ನು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆಸುತ್ತಿದೆ.
ಈ ವರ್ಷದ ಪರೀಕ್ಷೆಯು ಮುಂದಿನ ಜನವರಿ 3ರಂದು ಸಂಬಂಧಿಸಿದ ಕಾಲೇಜುಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು 65ರೂ. ಶುಲ್ಕಗಳೊಂದಿಗೆ ಡಿಸೆಂಬರ್ 20ರೊಳಗೆ ರೆಡ್‌ಕ್ರಾಸ್‌ನ ವೆಬ್‌ಸೈಟ್ -www.redcross karnataka.org- ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಸಂಸ್ಥೆಗಳ ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ರೆಡ್‌ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು (ಮೊಬೈಲ್: 9964583433) ಇವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.





