ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಉಡುಪಿ, ಡಿ.20: ಮದ್ಯಪಾನ ಮಾಡುವ ಚಟ ಹೊಂದಿದ್ದ ಪುತ್ತೂರು ಗ್ರಾಮದ ಮಾಸ್ತಿಯಮ್ಮ ದೇವಸ್ಥಾನ ಕೊಡವೂರು ಸೊಸೈಟಿ ಕ್ರಾಸ್ ಬಳಿ ನಿವಾಸಿ ಅಭಿಷೇಕ್(30) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.19ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು: ಪತ್ನಿಯ ಮರಣ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹೆರ್ಮುಂಡೆ ಗ್ರಾಮದ ಕುಡ್ಜೆ ಬಳಿ ನಿವಾಸಿ ಸುಬ್ರಾಯ ನಾಯಕ್(78) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.18ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





