Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಡಿವಾಳ ಮಾಚಿದೇವ ಅಸ್ಪಶ್ಯರ ಬದುಕಿಗೆ ಆಶಾ...

ಮಡಿವಾಳ ಮಾಚಿದೇವ ಅಸ್ಪಶ್ಯರ ಬದುಕಿಗೆ ಆಶಾ ಕಿರಣ: ಯಶ್ಪಾಲ್ ಸುವರ್ಣ

ವಾರ್ತಾಭಾರತಿವಾರ್ತಾಭಾರತಿ1 Feb 2026 8:22 PM IST
share
ಮಡಿವಾಳ ಮಾಚಿದೇವ ಅಸ್ಪಶ್ಯರ ಬದುಕಿಗೆ ಆಶಾ ಕಿರಣ: ಯಶ್ಪಾಲ್ ಸುವರ್ಣ

ಉಡುಪಿ, ಫೆ.1: ಹನ್ನೆರಡನೇ ಶತಮಾನದಲ್ಲಿ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ ಸೇರಿದಂತೆ ಅನೇಕ ಸಾಮಾಜಿಕ ಅಸಮಾನತೆಗೆ ಒಳಗಾಗಿದ್ದ ಜನರ ಬದುಕಿಗೆ ಆಶಾ ಕಿರಣವಾಗಿ ಸಮಾಜದ ಏಳಿಗೆಗೆ, ಸಮಾಜದ ಒಗ್ಗಟ್ಟಿಗೆ ಹಾಗೂ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಾಚಿದೇವ ಅವರ ಆದರ್ಶ ಗಳನ್ನು ದೈನಂದಿನ ಜೀವನದಲ್ಲಿ ಯುವಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಎ.ಸುವರ್ಣ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀರಜಕ ಯಾನೆ ಮಡಿವಾಳ ಸಂಘ ಉಡುಪಿ ಇವರ ಸಹಯೋಗದಲ್ಲಿ ರವಿವಾರ ಉಡುಪಿಯ ಅಂಬಾಗಿಲು ಶ್ರೀಗುರು ಮಾಚೀದೇವ ಸಭಾಭವನದಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಶರಣರು ವಚನ ಸಾಹಿತ್ಯದಲ್ಲಿ ತಮ್ಮ ಅನುಭವಗಳನ್ನು ಮನ ಮುಟ್ಟುವ ಹಾಗೆ ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ನೀಡಿದ್ದಾರೆ. 12ನೇ ಶತಮಾನ ದಲ್ಲಿ ಬಸವಣ್ಣ, ಮಾಚಿದೇವ ಸೇರಿದಂತೆ ಹಲವಾರು ದಾರ್ಶನಿಕರು ಸನ್ಮಾಗದಲ್ಲಿ ನಡೆಯಲು ಹಾದಿ ತೋರಿದ್ದಾರೆ ಎಂದರು.

ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಉಪನ್ಯಾಸ ನೀಡಿ, ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ನವರ ನೇತೃತ್ವದಲ್ಲಿ ಕಲ್ಯಾಣದಲ್ಲಿ ನಡೆದ ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಹೋರಾಡಿದ ಶರಣರು ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ್ದಾರೆ. ಸುಮಾರು 850 ವರ್ಷಗಳ ಹಿಂದೆ ಶರಣರು ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ತಮ್ಮ ವಚನಗಳ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದರು.

ಶ್ರಮ ಜೀವಿಯಾದ ಇವರು ಕಾಯಕ ನಿಷ್ಠೆಗೆ ಹೆಸರುವಾಸಿಯಾಗಿದ್ದರು. ಕಲ್ಯಾಣದಲ್ಲಿ ಮಡಿ ಮಾಡುವ ಕಾಯಕದಲ್ಲಿ ತೊಡಗಿದ್ದ ಇವರ ಕಾಯಕ ಭಕ್ತಿಗೆ ಬಸವಣ್ಣ ನವರು ಸಹ ಶರಣಾಗಿದ್ದರು ಎಂದ ಅವರು, ಹನ್ನೆರಡನೇ ಶತಮಾನ ದಲ್ಲಿ ಶಿವ-ಶರಣರು ಸಾವಿರಾರು ವಚನಗಳನ್ನು ರಚಿಸಿದ್ದಾರೆ ಅವುಗಳು ಇಂದಿಗೂ ಪ್ರಸ್ತುತವಾಗಿದ್ದು, ಅವುಗಳಲ್ಲಿ ರುವ ತತ್ವಗಳನ್ನು ಪಾಲಿಸಿದ್ದಲ್ಲಿ ಅವು ನಮ್ಮಲ್ಲಿ ಬದುಕಿನಲ್ಲಿ ಮನುಷ್ಯತ್ವ ರೂಪಿಸಲು ಸಹಕರಿ ಯಾಗಲಿದೆ ಎಂದರು

ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ವಹಿಸಿದ್ದರು. ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಸಮುದಾಯದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ವರ್ಷ ಬಿ.ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ರಜಕ ಯಾನೆ ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ಮಡಿವಾಳ ಹೆರ್ಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X