ಮಾರಿ ಜಾತ್ರೆ: ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯ ಮಾರಿ ಜಾತ್ರೆ ಹಿನ್ನೆಲೆ ಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ದೇಶಿಯ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 21ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಗುಜ್ಜಾಡಿ ಹಾಗೂ ಗಂಗೊಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಫೆಬ್ರವರಿ 4ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12:00ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪಿಯಲ್ಲಿ ಒಣದಿನ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಆದೇಶ ಹೊರಡಿಸಿದ್ದಾರೆ.
Next Story





