ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

ಉಡುಪಿ, ಮಾ.7: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್ ರೇ ಸೇವೆಯಲ್ಲಿ ವ್ಯತ್ಯಯದಿಂದ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಸರ್ಜನ್ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ನೂತನ ಎಕ್ಸ್ ರೇ ಯಂತ್ರವನ್ನು ನೀಡಿದ್ದು, ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ದಿನನಿತ್ಯ ಚಿಕಿತ್ಸೆಗೆ ಬರುವ ನೂರಾರು ರೋಗಿಗಳಿಗೆ ಸಹಕಾರಿಯಾಗಲಿದೆ ಎಂದರು.
ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಅಶೋಕ್ ಮಾತನಾಡಿದರು. ಈ ಸಂದರ್ಭದಲ್ಲಿ ಫೆಡರೇಷನ್ ಉಪಾಧ್ಯಕ್ಷ ದೇವಪ್ಪ ಕಾಂಚನ್, ನಿರ್ದೇಶಕ ರಾದ ರಾಮಚಂದ್ರ ಕುಂದರ್, ಸುರೇಶ್ ಸಾಲ್ಯಾನ್, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ರಶ್ಮಿ ಸಿ.ಭಟ್, ಸುಂದರ ಕಲ್ಮಾಡಿ, ಯೋಗೀಶ್ ಸಾಲ್ಯಾನ್, ಟಿ.ಜಿ.ಹೆಗ್ಡೆ, ಹರೀಶ್ ಶೆಟ್ಟಿ, ಎಡ್ಲಿನ್ ಕರ್ಕಡ, ಮೀನುಗಾರ ಮುಖಂಡರಾದ ದಯಾನಂದ ಸುವರ್ಣ, ಜಗನ್ನಾಥ ಕಡೆಕಾರ್, ಸುಭಾಷ್ ಮೆಂಡನ್, ಸತೀಶ್ ಕುಂದರ್, ಉಡುಪಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ, ವೈದ್ಯರಾದ ಡಾ. ಆಮ್ನ ಮೊದಲಾದವರು ಉಪಸ್ಥಿತರಿದ್ದರು.







