Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ...

ಸರಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿ ಬಳಕೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ7 March 2026 9:35 PM IST
share
ಸರಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿ ಬಳಕೆಗೆ ವಿರೋಧ

ಉಡುಪಿ, ಮಾ.7: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 600 ಕೋಟಿ ರೂ.ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವುದನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತೀವ್ರವಾಗಿ ವಿರೋಧಿಸಿದೆ.

ತರಬೇತಿ ಕೇಂದ್ರಗಳ ಸ್ಥಾಪನೆ ರಾಜ್ಯ ಸರಕಾರದ ಕೆಲಸ. ಜೊತೆಗೆ ಈ ತರಬೇತಿ ಕೇಂದ್ರಗಳಲ್ಲಿ ಕೇವಲ ಕಟ್ಟಡ ಕಾರ್ಮಿಕರ ಮಕ್ಕಳು ಮಾತ್ರವಲ್ಲದೇ ಎಲ್ಲರಿಗೂ ಪ್ರವೇಶಾವಕಾಶವಿದೆ. ಆದ್ದರಿಂದ ಕಲ್ಯಾಣ ಮಂಡಳಿಯಿಂದ 600 ಕೋಟಿ ರೂ. ವೆಚ್ಚ ಮಾಡುವ ನಿರ್ಧಾರವು ಕಟ್ಟಡ ಕಾರ್ಮಿಕರಿಗೆ ಬಗೆಯುವ ದ್ರೋಹವಾಗಿರುತ್ತದೆ ಎಂದು ಫೆಡರೇಷನ್‌ನ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಹಾಗೂ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ಅಭಿವೃದ್ಧಿ ಅಕಾಡೆಮಿಗಳನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯನ್ನು ಬಳಸಿ ನಿರ್ಮಾಣ ಮಾಡುವ ಪ್ರಸ್ತಾಪವು 1996ರ ಕಟ್ಟಡ ಕಾರ್ಮಿಕರ ಕಾಯ್ದೆಯ ಉದ್ದೇಶವನ್ನೇ ಬುಡಮೇಲು ಮಾಡಲಿದೆ ಎಂದವರು ಅಭಿಪ್ರಾಯಪಟ್ಟರು.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯು ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಸೇರಿದಂತೆ ಕಾರ್ಮಿಕರ ಆರೋಗ್ಯ ಸುರಕ್ಷತೆ ಹಾಗೂ ಶಿಕ್ಷಣದ ಅಗತ್ಯತೆಗಳಿಗಾಗಿ ಬಳಸಬೇಕು ಮತ್ತು ಇದನ್ನು ಹೊರತು ಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸಬಾರದೆಂದು ಕಾಯ್ದೆ ಹೇಳುತ್ತದೆ. ಸುಪ್ರೀಂ ಕೋರ್ಟ್ ಸಹ ಇದನ್ನೇ ಎತ್ತಿ ಹಿಡಿದಿದೆ ಎಂದವರು ಹೇಳಿಕೆಯಲ್ಲಿ ಪ್ರತಿಪಾದಿಸಿದ್ದಾರೆ.

ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಸರಕಾರದ ಈ ಮೂರು ಬಜೆಟ್ ಪ್ರಸ್ತಾಪಗಳನ್ನು ತೀವ್ರವಾಗಿ ವಿರೋಧಿಸುತ್ತದೆ. ಹಾಗೂ ಇದನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದೆ.

ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ತೀವ್ರ ಪ್ರತಿಭಟನೆಗಳನ್ನು ನಡೆಸುವ ಎಚ್ಚರಿಕೆಯನ್ನೂ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X