ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟ

ಉಡುಪಿ, ಮಾ.8: ಭಾರತ ಸರಕಾರದ ಮಿನಿಸ್ಟರಿ ಆಫ್ ಯೂತ್ ಅಫೈಯರ್ಸ್ ಅಂಡ್ ಸ್ಪೋರ್ಟ್ಸ್, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್, ಅಸ್ಮಿತಾ, ಖೇಲೋ ಇಂಡಿಯಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟವನ್ನು ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿ ಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಇನ್ನು ಉತ್ತಮ ಕ್ರೀಡಾ ಪಟುಗಳಾಗಿ ರಾಜ್ಯ, ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಯನ್ನು ಪಡೆಯಬೇಕು. ದೇಶದ ಉತ್ತಮ ಪ್ರಜೆಗಳಾಗಿ, ಹಾಗೂ ದೇಶದ ಪ್ರಗತಿಗೆ ಮಹಿಳೆಯರ ಪಾತ್ರ ಮಹತ್ವವಾಗಿದೆ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಯುವಜನ ಸೇವಾ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಅಸೋಸಿಯೇಶನ್‌ನ ಉಡುಪಿ ಅಥ್ಲೆಟಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ವಂದಿಸಿದರು. ಜೊತೆ ಕಾರ್ಯದರ್ಶಿ ಸುದರ್ಶನ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.





