ಅಕ್ರಮ ಅನ್ನಭಾಗ್ಯದ ಅಕ್ಕಿ ದಾಸ್ತಾನು: ಇಬ್ಬರು ಆರೋಪಿಗಳ ಬಂಧನ

ಬೈಂದೂರು, ಮಾ.9: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯಂತೆ ಬೈಂದೂರು ಆಹಾರ ನಿರೀಕ್ಷಕ ವಿನಯ ಕುಮಾರ್ ಎಂಬವರು ಪೊಲೀಸರೊಂದಿಗೆ ದಾಳಿ ನಡೆಸಿ, ಅಕ್ರಮವಾಗಿ ಅಕ್ಕಿ ದಾಸ್ತಾನು ಇರಿಸಿದ್ದ ಅಬ್ದುಲ್ ಮಜೀದ ಮತ್ತು ಐಶಾ ವಾಸೀಂ ಎಂಬವರು ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವುದು ಕಂಡುಬಂದಿದೆ.
ಆರೋಪಿಗಳಿಂದ ಒಟ್ಟು 400 ಕೆಜಿ ತೂಕದ 9200ರೂ. ಮೌಲ್ಯದ 15 ಚೀಲ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





