Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ...

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 March 2026 9:25 PM IST
share
ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ, ಮಾ.9: ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅದನ್ನು ಆ ಸಂಸ್ಥೆ ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ಆದ್ದರಿಂದ ಅದನ್ನು ಸಾರ್ವಜನಿಕರ ಬಳಕೆಗೆ ತೆರವುಗೊಳಿಸಬೇಕು ಎಂದು ಗ್ರಾಮಸ್ಥ ಪ್ರಭಾಕರ ಕೋಟ್ಯಾನ್ ಒತ್ತಾಯಿಸಿದ್ದಾರೆ.

ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ವಿಎಸ್ ಹೈಸ್ಕೂಲ್ ಕಟಪಾಡಿ ಎಂಬ ಖಾಸಗಿ ವಿದ್ಯಾಸಂಸ್ಥೆ ಸರಕಾರಿ ಜಾಗದಲ್ಲಿ ಆಟದ ಮೈದಾನವನ್ನು ಎಲಿನೇಶನ್ ಮೂಲಕ ಹೊಂದಿದ್ದು, ಇದೀಗ ಆಟದ ಮೈದಾನಕ್ಕೆ ಗೇಟು ಅಳವಡಿಸಿ, ಬೀಗ ಹಾಕಿದ್ದಾರೆ. ಅಲ್ಲದೇ ಇದಕ್ಕೆ ಎಸ್‌ವಿಎಸ್ ಕ್ರೀಡಾಂಗಣ ಎಂಬ ನಾಮಫಲಕವನ್ನೂ ಅಳವಡಿಸಿದ್ದಾರೆ ಎಂದು ದೂರಿದರು.

ಹಲವು ದಶಕಗಳಿಂದ ಪಳ್ಳಿಗುಡ್ಡೆ ಮೈದಾನವೆಂದು ನಿತ್ಯ ಬಳಕೆಯಲ್ಲಿ, ನೆಹರೂ ಮೈದಾನವೆಂದು ಸಾರ್ವಜನಿಕ ವಾಗಿ ಕರೆಯಲ್ಪಡುತಿದ್ದ ಈ ಮೈದಾನ ಸಾರ್ವಜನಿಕರ ಬಳಕೆ, ಮಕ್ಕಳ ದೈನಂದಿನ ಆಟಕ್ಕೆ ಬಳಕೆಯಾಗುತ್ತಿತ್ತು. ಆದರೇ ಈಗ ಸಂಸ್ಥೆಯವರು ಮೈದಾನಕ್ಕೆ ಗೇಟು ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಟವಾ ಡಲು ಪ್ರತಿದಿನಕ್ಕೆ 3,000ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡುತಿದ್ದಾರೆ. ಈ ದಂಧೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದವರು ಆರೋಪಿಸಿದರು.

ಅಲ್ಲದೇ ಸರಕಾರಿ ಜಾಗದಲ್ಲಿ ಬೇರೆ ಬೇರೆ ಕಟ್ಟಡಗಳನ್ನು, ವೇದಿಕೆಯನ್ನು ನಿರ್ಮಿಸಲು ಮುಂದಾಗಿದ್ದು, ಗ್ರಾಮಪಂಚಾಯತ್ ಈಗಾಗಲೇ ಅದನ್ನು ತೆರವು ಗೊಳಿಸುವಂತೆ ನಿರ್ಣಯ ತೆಗೆದುಕೊಂಡು ನೋಟೀಸು ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರಭಾಕರ ಕೋಟ್ಯಾನ್ ತಿಳಿಸಿದರು.

ಈ ಮೈದಾನವನ್ನು ಕಾಪು ತಾಲೂಕಿನ ‘ತಾಲೂಕು ಕ್ರೀಡಾಂಗಣ’ವಾಗಿ ಘೋಷಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 10 ದಿನದೊಳಗೆ ಮೈದಾನಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸದಿದ್ದರೆ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ. ಗ್ರಾಮಸ್ಥ ಶೈಲೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X