ಅಪಘಾತ: ಗಾಯಾಳು ಬೈಕ್ ಸವಾರ ಮೃತ್ಯು

ಉಡುಪಿ, ಮಾ.10: ಸಂತೆಕಟ್ಟೆ ಲಕ್ಷ್ಮೀನಗರ ಎಂಬಲ್ಲಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮಹಮ್ಮದ್ ಝೈದ್(19) ಎಂದು ಗುರುತಿಸಲಾಗಿದೆ. ಸರಕಾರಿ ಬಸ್, ಬೈಕ್‌ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಝೈದ್ ಉಡುಪಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗಂಭೀರ ಸ್ಥಿತಿಯಲ್ಲಿದ್ದ ಅವರು ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು ಓರ್ವ ಸಹೋದರ ಮತ್ತು ತಂದೆ ತಾಯಿಯನ್ನು ಅಗಲಿದ್ದಾರೆ.
Next Story





