ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಲ್ಪೆ, ಮಾ.10: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಒಂದು ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಡುತೋನ್ಸೆ ಗ್ರಾಮ ಹೂಡೆಯ ಮಹಮ್ಮದ್ ಅಕ್ರಂ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಆದರ್ಶ, ಮಹಾಲಕ್ಷ್ಮಿ ಮತ್ತು ಎಸ್ಸೈ ಹುಸೇನ್ ಸಾಬ್ ಮಾ.10ರಂದು ಹೂಡೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ಮಾ.27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Next Story





