ವ್ಯಂಗ್ಯಚಿತ್ರ ಕ್ಷೇತ್ರದ ಸಾಧಕ ಜೀವನ್ ಶೆಟ್ಟಿಗೆ ಸನ್ಮಾನ

ಉಡುಪಿ, ಮಾ.11: ಉಡುಪಿ ಆರ್ಟಿಸ್ಟ್ ಫೋರಂ ವತಿಯಿಂದ ಗ್ಯಾಲರಿ ದೃಷ್ಟಿಯಲ್ಲಿ ಆಯೋಜಿಸಿದ್ದ ಚಿತ್ರಕಲೆ ಮತ್ತು ಛಾಯಾಚಿತ್ರ ಕಲಾಕೃತಿಗಳ 3ದಿನಗಳ ’ಪಯಣ’ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಇತ್ತೀಚೆಗೆ ವ್ಯಂಗ್ಯ ಚಿತ್ರ ಕ್ಷೇತ್ರದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತ ಫೋರಂ ಸದಸ್ಯ ಜೀವನ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಂಜನ್, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಮಂಗಳೂರು ಫಿಶರೀಸ್ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ.ಶಿವಪ್ರಕಾಶ್, ಆರ್ಟಿಸ್ಟ್ ಫೋರಂ ಅಧ್ಯಕ್ಷ ರಮೇಶ್ ರಾವ್, ಕಾರ್ಯದರ್ಶಿ ಸಕು ಪಾಂಗಳ ಉಪಸ್ಥಿತರಿದ್ದರು.
Next Story





