Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲ್ಲಂಗಡಿ ಬೆಳೆ ಹಾನಿ; ರೈತರಿಗೆ ಸೂಕ್ತ...

ಕಲ್ಲಂಗಡಿ ಬೆಳೆ ಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡಲು ಬೈಂದೂರು ಶಾಸಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 March 2026 9:28 PM IST
share
ಕಲ್ಲಂಗಡಿ ಬೆಳೆ ಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡಲು ಬೈಂದೂರು ಶಾಸಕರ ಆಗ್ರಹ

ಬೈಂದೂರು, ಮಾ.17: ಬೈಂದೂರು ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ ಪ್ರಸ್ತುತ ವರ್ಷ ಕಲ್ಲಂಗಡಿ ಹಣ್ಣಿನ ಮೊದಲ ಬೆಳೆಗೆ ಸೊರಗು ರೋಗ ತಗುಲಿ ಬೆಳೆ ಹಾನಿ ಸಂಭವಿಸಿರುವುದರಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ಹಾಗೂ ಕಲ್ಲಂಗಡಿ ಬೆಳೆಗಾರರ ಹಿತ ಕಾಪಾಡಲು ಹಾಗೂ ಉತ್ತಮ ದರವನ್ನು ದೊರಕಿಸಿಕೊಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೆಂಗಳೂರಿನಲ್ಲಿ ಇಂದು ನಡೆದ ವಿಧಾನಸಭಾ ಅಧಿವೇಶದಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಒತ್ತಾಯಿಸಿದರು.

ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ 180 ಎಕ್ರೆ ಕಲ್ಲಂಗಡಿ ಬೆಳೆ ಪ್ರದೇಶವಿದ್ದು, ಪ್ರಸ್ತುತ ವರ್ಷ ಕಲ್ಲಂಗಡಿ ಹಣ್ಣಿನ ಮೊದಲ ಬೆಳೆಗೆ ಸೊರಗು ರೋಗ ತಗುಲಿ ಕಟಾವು ಹಂತದಲ್ಲಿ 40 ಎಕ್ರೆ ಪ್ರದೇಶದಲ್ಲಿ ರೋಗಬಾಧೆ ಕಂಡು ಬಂದಿರುವುದಾಗಿ ಅಂದಾಜಿಸಲಾಗಿದೆ ಎಂದರು.

ರೋಗ ಕಂಡು ಬಂದಿರುವ ತೋಟಗಳಲ್ಲಿ ಶೇ.40ರಿಂದ 50ರಷ್ಟು ಇಳುವರಿ ಕಡಿಮೆಯಾಗಿರುವುದಾಗಿ ಅಂದಾಜಿಸ ಲಾಗಿದೆ. ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡುವ ಕಾರ್ಯಕ್ರಮ ಇಲಾಖೆಯಲ್ಲಿ ಇರುವುದಿಲ್ಲ ಹಾಗೂ ಕಲ್ಲಂಗಡಿ ಬೆಳೆಗಾರರ ಹಿತ ಕಾಪಾಡಲು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಯಡಿ ಹೊಸ ಪ್ರದೇಶ ವಿಸ್ತರಣೆಗೆ ಪ್ರತಿ ಹೆಕ್ಟೆರ್‌ಗೆ ರೂ. 0.60 ಲಕ್ಷ ಘಟಕ ವೆಚ್ಚದ ಶೇ.40ರಂತೆ ರೂ.0.24 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು 2 ಹೆಕ್ಟೆರ್‌ವರೆಗೆ ಶೇ.90 ರಷ್ಟು ಮತ್ತು 3ರಿಂದ 5 ಹೆಕ್ಟೆರ್‌ವರೆಗೆ ಶೇ.45ರಷ್ಟು ಸಹಾಯಧನ ನೀಡಲಾಗುತ್ತಿದೆ. ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ಲಾಸ್ಟಿಕ್ ಹೊದಿಕೆ ಹೊದಿಸಲು ಪ್ರತಿ ಹೆಕ್ಟೆರ್‌ಗೆ ರೂ. 0.40 ಲಕ್ಷ ಗಳ ಘಟಕ ವೆಚ್ಚದ ಶೇ.50ರಂತೆ 0.20 ಲಕ್ಷ ಸಹಾಯಧನ ನೀಡಲಾಗುತ್ತಿದೆ.

ಅಲ್ಲದೇ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮಗ್ರ ಪೋಷಕಾಂಶ, ಕೀಟ/ರೋಗಗಳ ನಿರ್ವಹ ಣೆಗೆ ಸಹಾಯಧನ ಮತ್ತು ಕಲ್ಲಂಗಡಿ ಸೇರಿದಂತೆ ತೋಟಗಾರಿಕಾ ಉತ್ಪನ್ನಗಳ ದರ ಕುಸಿತದ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಸಚಿವರು ಶಾಸಕರ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ 15651.65 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆಯುತಿದ್ದು, ಉಡುಪಿ ಜಿಲ್ಲೆಯಲ್ಲೂ 230 ಎಕರೆ ವಿಸ್ತೀರ್ಣದಲ್ಲಿ ಈ ಬೆಳೆಯನ್ನು ಬೆಳೆಯಲಾಗುತ್ತಿದೆ ಎಂದು ಸಚಿವರು ನುಡಿದರು. ಕಲ್ಲಂಗಡಿ ಬೆಳೆಗೆ ಸೊರಗು ರೋಗ, ಕೀಟ ಬಾಧೆ ಸೇರಿದಂತೆ ಇನ್ನಿತರ ರೋಗ ನಿವಾರಣೆಗೆ ಬೆಳೆಗಾರರಿಗೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾಹಿತಿ ಕೈಪಿಡಿ ಒದಗಿಸುವಂತೆ ಇದೇ ಸಂದರ್ಭದಲ್ಲಿ ಶಾಸಕರು ಸಚಿವರಿಗೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X