ನರೇಂದ್ರ ಕುಮಾರ್ ಕೋಟಗೆ ಹುಟ್ಟೂರ ಸಾಹಿತ್ಯ ಸಾಧಕ ಶ್ರೀ ಪುರಸ್ಕಾರ

ಕೋಟ: ಮಿತ್ರ ಮಂಡಳಿ ಕೋಟ ನೀಡುತ್ತಿರುವ ಸಾಹಿತ್ಯ ಸಾಧಕರಿಗೆ ಈ ವರ್ಷದ ಹುಟ್ಟೂರ ಸಾಹಿತ್ಯ ಸಾಧಕ ಪುರಸ್ಕಾರಕ್ಕೆ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿದ್ದಾರೆ.
ಉಸಿರು ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಕಳೆದ 25 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಿ ಎಳೆಯ ಮಕ್ಕಳಲ್ಲಿ ಕನ್ನಡದ ಪ್ರೀತಿ ಮತ್ತು ಸಾಹಿತ್ಯ ರಚನೆಯ ಅಭಿರುಚಿಯನ್ನು ಮೂಡಿ ಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಲ್ಲದೆ ಅವರು ಬರೆದಿರುವ ಅನೇಕ ಕೃತಿಗಳನ್ನು ತಮ್ಮ ಸಂಸ್ಥೆಯ ಮೂಲಕ ಪ್ರಕಟಿಸಿದ್ದಾರೆ.
ಅತ್ಯುತ್ತಮ ಸಂಘಟಕರಾಗಿರುವ ಇವರು ಜಿಲ್ಲಾ ಹಾಗೂ ರಾಜ್ಯಮಟ್ಟದ ಅನೇಕ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿದ್ದಲ್ಲದೆ ಐದು ಕುಂದಾಪ್ರ ಕನ್ನಡ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾ ಗಿದೆ. ಬಹುಮುಖ ಪ್ರತಿಭಾವಂತರಾಗಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದ ಇವರ ನಿಷ್ಠೆಯ ಕನ್ನಡ ಪರಿಚಾರಿಕೆ ಗಾಗಿ ಅರ್ಹರಾಗಿದ್ದಾರೆ. ಎ.4ರಂದು ಅಪರಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥುಕ ಶಾಲೆ ಕೋಟದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡುವುದೆಂದು ಪ್ರಕಟಣೆ ತಿಳಿಸಿದೆ.







