Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಿಳೆಯರು ಯಕ್ಷಗಾನ ಕಲಿತರೆ ಸಂಸ್ಕಾರದ...

ಮಹಿಳೆಯರು ಯಕ್ಷಗಾನ ಕಲಿತರೆ ಸಂಸ್ಕಾರದ ಮಾರ್ಗ ತೆರೆದಂತೆ: ತಲ್ಲೂರು

ವಾರ್ತಾಭಾರತಿವಾರ್ತಾಭಾರತಿ3 April 2026 6:51 PM IST
share
ಮಹಿಳೆಯರು ಯಕ್ಷಗಾನ ಕಲಿತರೆ ಸಂಸ್ಕಾರದ ಮಾರ್ಗ ತೆರೆದಂತೆ: ತಲ್ಲೂರು

ಉಡುಪಿ, ಎ.3: ಯಕ್ಷಗಾನ ಜ್ಞಾನ ಭಂಡಾರವಿದ್ದಂತೆ. ಇಂದಿನ ಆಧುನಿಕ ಸಮಾಜಕ್ಕೆ ಸಂಸ್ಕಾರ ಮಾರ್ಗವನ್ನು ಯಕ್ಷಗಾನದ ಮೂಲಕ ನೀಡಬಹುದು. ಮಹಿಳೆಯೊಬ್ಬಳು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಯಕ್ಷಗಾನ ಕಲಿತ ಮಹಿಳೆ ತನ್ನ ಕುಟುಂಬಕ್ಕೆ, ಸಮಾಜಕ್ಕೆ ಉತ್ತಮ ಸಂಸ್ಕಾರದ ದಾರಿಯನ್ನು ತೋರಬಲ್ಲಳು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಕಲಾಪೀಠ ಕೋಟ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಪ್ರಾಯೋಜಕತ್ವದಲ್ಲಿ ಕೆ.ನರಸಿಂಹ ತುಂಗ ಅವರ ನಿರ್ದೇಶನದಲ್ಲಿ ಸಾಲಿಗ್ರಾಮ ಗುಂಡ್ಮಿ ಸದಾನಂದ ರಂಗ ಮಂಟಪದಲ್ಲಿ ಮಂಗಳವಾರ ಆಯೋಜಿಸಲಾದ ಮಹಿಳೆಯರಿಂದ ಯಕ್ಷಗಾನ ’ಶೂರ್ಪನಖಾ ಮಾನಭಂಗ’ ಪ್ರದರ್ಶನದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡುತಿದ್ದರು.

ಮಕ್ಕಳಿಗೆ ಸಂಸ್ಕಾರವನ್ನು ಬೆಳೆಸಬೇಕಾದರೆ ಯಕ್ಷಗಾನವನ್ನು ಕಲಿಸಿ. ನಮ್ಮ ಪುರಾಣಗಳ ಬಗ್ಗೆ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರವನ್ನು ಕೂಡಾ ನೀಡಿದಂತಾಗುತ್ತದೆ. ಇದರಿಂದ ವೃದ್ಧಾಪ್ಯದಲ್ಲಿ ತಂದೆತಾಯಿಯರು ವೃದ್ಧಾಶ್ರಮ ವನ್ನು ಸೇರುವ ಪ್ರಮೇಯ ತಪ್ಪುತ್ತದೆ. ನನ್ನ ಮಗ, ಮಗಳು, ಮೊಮ್ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ನೋವನ್ನು ಅನುಭವಿಸುವ ಸಂಕಷ್ಟವೂ ತಪ್ಪುತ್ತದೆ. ಯಕ್ಷಗಾನ ಕಲೆಯ ಉಳಿವು ಬೆಳವಣಿಗೆಗೂ ಕಾರಣವಾಗುತ್ತದೆ ಎಂದ ಅವರು ಯಕ್ಷಗಾನ ಅಕಾಡೆಮಿ ಈ ನಿಟ್ಟಿನಲ್ಲಿ ಮಕ್ಕಳ ಹಾಗೂ ಮಹಿಳೆಯರ ಯಕ್ಷಗಾನ ತರಬೇತಿ, ಪ್ರದರ್ಶನಕ್ಕೆ ಹಚ್ಚಿನ ಮಹತ್ವ, ಪ್ರೋತ್ಸಾಹ ನೀಡುತ್ತಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಇಂದಿನ ತಂತ್ರಜ್ಞಾನದ ಯುಗದಲ್ಲಿ ಸಂಬಂಧಗಳು ಸಡಿಲಗೊಳ್ಳುತ್ತಿವೆ. ಮಕ್ಕಳು, ಹಿರಿಯರ ಜೊತೆಗೆ ಮಾತನಾಡಲು, ಬೆರೆಯಲು ಸಮಯವೇ ಇಲ್ಲ ಎಂಬಂತಾಗಿದೆ. ಹೀಗಾಗಿ ಯಕ್ಷಗಾನದಂತಹ ಕಲೆಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಕಲಿಸಿದರೆ ಅವರ ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಮಾರ್ಗವನ್ನು ತೋರಿಸಿದಂತಾಗುತ್ತದೆ. ಇಂದಿನ ಶಿಕ್ಷಣದ ಜೊತೆಗೆ ಯಕ್ಷಗಾನವನ್ನು ಕಲಿಸಿದರೆ ಅವರ ಶೈಕ್ಷಣಿಕ ಪ್ರಗತಿಗೂ ಪೂರಕವಾಗುತ್ತಿದೆ ಎಂಬುದು ಸಾಬೀತಾಗಿದೆ. ಹೀಗಾಗಿ ತಂದೆತಾಯಿ ಯಾವುದೇ ಅಳುಕಿಲ್ಲದೆ ಮಕ್ಕಳಿಗೆ ಯಕ್ಷಗಾನದಂತಹ ಕಲೆಗಳನ್ನು ಕಲಿಯಲು ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ರಾಮಚಂದ್ರ ಐತಾಳ್ ಗುಂಡ್ಮಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾಗವತ ಗಣೇಶ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಕಲಾ ನಿರ್ದೇಶಕ ಕೆ.ನರಸಿಂಹ ತುಂಗ ಸ್ವಾಗತಿಸಿದರು.

ಬಳಿಕ ಮಹಿಳೆಯರಿಂದ ಪ್ರದರ್ಶನಗೊಂಡ ‘ ಶೂರ್ಪನಖಾ ಮಾನ ಭಂಗ ’ ಪ್ರಸಂಗದಲ್ಲಿ ಹಿಮ್ಮೇಳದಲ್ಲಿ ಬಿಲ್ಲಾಡಿ ಗಣೇಶ್ ಆಚಾರ್ಯ, ಗಣೇಶ ಶೆಣೈ, ವಾಗ್ವಿಲಾಸ ಭಟ್ಟ ಹಾಗೂ ಮುಮ್ಮೇಳದಲ್ಲಿ ವೃಂದಾ, ಅನುಷಾ, ಮಾನ್ಯ, ನಮನ, ಜಾಹ್ನವಿ, ಸುಜಾತಾ, ಮೇಧಾ, ಧನುಶ್ರೀ, ಇಂಚರ, ಆರಭಿ, ಈಶಾನಿ, ತನಿಷಾ ಪ್ರದರ್ಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X