ಬೀಜಾಡಿ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಮೃತ್ಯು

ಕುಂದಾಪುರ, ಎ.10: ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.
ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Next Story





