ಸಾಲಬಾಧೆ: ಉದ್ಯಮಿ ಲಾಡ್ಜ್‌ನಲ್ಲಿ ಆತ್ಮಹತ್ಯೆ

ಬ್ರಹ್ಮಾವರ, ಎ.14: ಸಾಲದ ವಿಚಾರವಾಗಿ ಉದ್ಯಮಿಯೊಬ್ಬರು ಲಾಡ್ಜ್‌ನ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.13ರಂದು ರಾತ್ರಿ ನಡೆದಿದೆ.
ಮೃತರನ್ನು ನರಸಿಂಹ ಹೆಚ್.ಎಸ್.(66) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ನೆಲಮಂಗಲದಲ್ಲಿ ಶ್ರೀಕೃಷ್ಣ ಎಂಟರ್‌ಪ್ರೈಸಸ್ ಎಂಬ ಲೇಬರ್ ಕಾಂಟ್ರಾಕ್ಟ್ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದು, ವ್ಯವಹಾರ ದಲ್ಲಿ ಆರ್ಥಿಕವಾಗಿ ತೊಂದರೆಯಾದ ಹಿನ್ನೆಲೆಯಲ್ಲಿ ಬಡ್ಡಿಗಾಗಿ ಹಣ ಪಡೆದು ವ್ಯವಹಾರ ನಡೆಸುತ್ತಿದ್ದರು.
ಕಳೆದ ಎರಡು ತಿಂಗಳಿನಿಂದ ನರಸಿಂಹ ಅವರಿಗೆ ಸರಿಯಾದ ಸಮಯಕ್ಕೆ ಸಾಲದ ಬಡ್ಡಿಯನ್ನು ಪಾವತಿ ಮಾಡಲು ಸಾಧ್ಯವಾಗದ ಕಾರಣ, ಮನನೊಂದು ಬ್ರಹ್ಮಾವರದ ಆಶ್ರಯ ಲಾಡ್ಜ್‌ನ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




