ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

ಉಡುಪಿ, ಎ.28: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ವೈದ್ಯರಾಗಿ ಕಲಾವಿದರಾಗಿ ಮತ್ತು ಸಂಘಟಕರಾಗಿ ಡಾ.ಭಾಸ್ಕರಾನಂದ ಕುಮಾರ್ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವೈದ್ಯ ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಶ್ರೀನಿವಾಸ ಉಪಾಧ್ಯ, ಕಲಾಪೋಷಕ ಭುವನಪ್ರಸಾದ ಹೆಗ್ಡೆ, ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಪ್ರಭಾಕರ್ ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಪದಾಧಿಕಾರಿಗಳಾದ ರಂಜನಿ ವಸಂತ್, ಸತೀಶ್ ಕೊಡವೂರು,ರಾಜೇಶ್ ಭಟ್ ಪಣಿಯಾಡಿ, ಅನಿತಾ ಸಿಕ್ವೇರಾ, ರ್ಆ ವಸಂತ್, ಶಶಿಕಾಂತ್ ಶೆಟ್ಟಿ, ದೀಪಾ ಕರ್ಕಿ, ಚಂದ್ರಕಾಂತ್, ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.






