ಕನ್ನಡ ವೆಬ್‌ಸೈಟ್ ದಿವ್ಯಜ್ಯೋತಿ ಲೋಕಾರ್ಪಣೆ

ಉಡುಪಿ, ಮೇ 8: ಬರಹಗಾರ ಮೌಲಾನಾ ಝಮೀರ್ ಅಹ್ಮದ್ ರಶಾದಿ ಸಂಪಾದಕತ್ವದಲ್ಲಿ ಆರಂಭಗೊಂಡಿರುವ ಕನ್ನಡ ವೆಬ್‌ಸೈಟ್ ದಿವ್ಯಜ್ಯೋತಿಯನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಮೊಹಮ್ಮದ್ ತಬ್ರೇಜ್ ಆಲಂ ಷರೀಫ್, ಸಾಹಿತಿ ಹಾಗೂ ಪ್ರಾಧಿಕಾರದ ಸದಸ್ಯ ಮುಷ್ತಾಕ್ ಹೆನ್ನಾಬೈಲ್, ಕರ್ನಾಟಕ ಮುಸ್ಲಿಮ್ ಬಾಂಧವ್ಯ ವೇದಿಕೆ ಕರ್ನಾಟಕದ ಅಧ್ಯಕ್ಷ ಝಾಕೀರ್ ಹುಸೇನ್ ಉಚ್ಚಿಲ ಉಪಸ್ಥಿತರಿದ್ದರು.
ದಿವ್ಯಜ್ಯೋತಿ ಕನ್ನಡ ವೆಬ್ಸೈಟ್ ಕನ್ನಡ ಭಾಷೆ, ಸಾಹಿತ್ಯ, ಸಮಾಜಮುಖಿ ಚಿಂತನೆಗಳು ಹಾಗೂ ಸಾಂಸ್ಕೃತಿಕ ಮೌಲ್ಯ ಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶವನ್ನು ಹೊಂದಿದ್ದು, ಕನ್ನಡ ಓದುಗರಿಗೆ ಹೊಸ ಚಿಂತನಾ ವೇದಿಕೆ ಯಾಗಲಿದೆ ಎಂದು ಮೌಲಾನಾ ಝಮೀರ್ ಅಹ್ಮದ್ ರಶಾದಿ ತಿಳಿಸಿದ್ದಾರೆ.
Next Story




