ಲೇಬರ್ ಕೋಡ್ ಅಧಿಸೂಚನೆ ವಿರೋಧಿಸಿ ಪ್ರತಿ ಸುಟ್ಟು ಪ್ರತಿಭಟನೆ

ಉಡುಪಿ, ಮೇ 13: ಕೇಂದ್ರ ಸರಕಾರ ನಾಲ್ಕು ಲೇಬರ್ ಕೋಡ್ ಕುರಿತು ಅಧಿಸೂಚನೆ ಬಿಡುಗಡೆಗೊಳಿಸಿರುವುದನ್ನು ವಿರೋಧಿಸಿ ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಬುಧವಾರ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಯನ್ನು ಸುಟ್ಟು ಪ್ರತಿಭಟನೆ ನಡೆಸಲಾಯಿತು,
ಸಭೆಯನ್ನುದ್ದೇಶಿಸಿ ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಶಶಿಧರ್ ಗೊಲ್ಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಮಾತನಾಡಿದರು.
ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಸುಭಾಷ್ ನಾಯಕ್, ಮುಖಂಡರಾದ ಸೈಯದ್, ಮುರಳಿ, ಜನರಲ್ ವರ್ಕಸ್ ಯೂನಿಯನ್ ಕಾರ್ಯದರ್ಶಿ ರಮೇಶ್, ಬೀಡಿ ಎಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷ ನಳಿನಿ ಎಸ್., ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಸರೋಜ ಎಸ್., ಮುಖಂಡರಾದ ಶಾರದ, ಸಿಐಟಿಯು ಮುಖಂಡರಾದ ನಾಗೇಶ್, ವಿಶ್ವನಾಥ ಉಪಸ್ಥಿತರಿದ್ದರು
ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್.ಕಾಂಚನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




