Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ| ಸಂಸದರ ಕಚೇರಿಗೆ ಮುತ್ತಿಗೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ15 May 2026 6:32 PM IST
share
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ| ಸಂಸದರ ಕಚೇರಿಗೆ ಮುತ್ತಿಗೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಉಡುಪಿ, ಮೇ 15: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲಕ ಕೇಂದ್ರ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ವಾಡುತ್ತಿದೆ. ಕಳೆದ 10ವರ್ಷಗಳಲ್ಲಿ 70 ಅಧಿಕ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸೋರಿ ಮಾಡಲಾಗಿದೆ. ಅಚ್ಚೆ ದಿನ ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದವರು ಈಗ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ ಎಂದು ಟೀಕಿಸಿದರು.

ಕೋಮು ಸಂಬಂಧಿತ ವಿಚಾರಗಳಿಗೆ ತಕ್ಷಣ ಪ್ರತಿಕ್ರಿಯೆ ನೀಡುವ ಉಡುಪಿ ಸಂಸದರು, ಶಾಸಕರು, ಈ ಬಗ್ಗೆ ಮಾತ್ರ ಮೌನ ವಹಿಸಿದ್ದಾರೆ. ಹಿಜಾಬ್, ಕೇಸರಿ ಶಾಲುಗಳ ಬಗ್ಗೆ ಮಾತನಾಡುವ ಇವರು ನೀಟ್ ಪರೀಕ್ಷೆಯಿಂದ ಅನ್ಯಾಯ ವಾಗಿರುವ ಮಕ್ಕಳ ಬಗ್ಗೆ ಯಾಕೆ ಮಾತನಾಡುತಿಲ್ಲ. ಅವರೆಲ್ಲ ಹಿಂದುಗಳಲ್ಲವೇ ಎಂದು ಪ್ರಶ್ನಿಸಿದ ಅವರು, ಇಲ್ಲಿನ ಶಾಸಕರನ್ನು ಕೋಮು ಗಲಭೆ ಮಾಡಲು ಆಯ್ಕೆ ಮಾಡಲಾಗಿದೆಯೇ ಎಂಬುದನ್ನು ಜನರ ಮುಂದೆ ಸ್ಪಷ್ಟ ಪಡಿಸ ಬೇಕು. ಇಲ್ಲದಿದ್ದರೆ ಶಾಸಕರುಗಳ ಕಚೇರಿಗೆ ಮುತ್ತಿಗೆ ಹಾಕುವ ಕೆಲಸವನ್ನು ಯುವ ಕಾಂಗ್ರೆಸ್ ಮಾಡುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಸುರಯ್ಯ ಅಂಜುಮ್ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ನೀಟ್ ಪರೀಕ್ಷೆಯಲ್ಲಿ ಹಗರಣ ಆಗಿದೆ. ಹಿಂದೆ ನಡೆದ ಹಗರಣದ ತನಿಖೆಗಾಗಿ ವಿಶೇಷ ತಂಡ ರಚಿಸಿದ್ದು, ಈ ತಂಡ ನೀಡಿದ ವರದಿ ಬಗ್ಗೆ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸದ ಪರಿಣಾಮ ಇದೀಗ ಮತ್ತೆ ನೀಟ್ ಪರೀಕ್ಷೆಯಲ್ಲಿ ಹಗರಣ ನಡೆದಿದೆ. ಈ ಮೂಲಕ ದೇಶದ 23ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಕತ್ತಲೆಯಲ್ಲಿ ಬಿದ್ದಿದೆ. ವಿದ್ಯಾರ್ಥಿಗಳ ಬಾಳಿನಲ್ಲಿ ಕತ್ತಲೆಯನ್ನು ತಂದಿರುವುದೇ ಮೋದಿಯ ಅಚ್ಚೇ ದಿನ್ ಆಗಿದೆ ಎಂದು ಆರೋಪಿಸಿದರು.

ಬಳಿಕ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಚೇರಿಗೆ ಮುತ್ತಿಗೆ ಯತ್ನಿಸಿದರು. ಆದರೆ ಪೊಲೀಸರು ಡಿಸಿ ಕಚೇರಿ ಗೇಟ್‌ನಲ್ಲಿಯೇ ಪ್ರತಿಭಟನಕಾರರನ್ನು ತಡೆದು ವಶಕ್ಕೆ ಪಡೆದುಕೊಂಡರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಯುವ ಕಾಂಗ್ರೆಸ್ ಮುಖಂಡರಾದ ಅಜಿತ್ ಶೆಟ್ಟಿ, ಸುದೇಶ್ ಶೆಟ್ಟಿ, ನವೀನ್ ಸಾಲ್ಯಾನ್ ಕುಕ್ಕೆಹಳ್ಳಿ, ಆತೀಫ್, ಪ್ರದೀಪ್ ಶೆಟ್ಟಿ ನಲ್ಲೂರು, ಮಂಜುನಾಥ್ ಶೆಟ್ಟಿ, ಅಕ್ಷತ್ ಪೈ, ಶಿರಿಶ್, ಜುನೈದ್, ಶಶಿಧರ್ ಹವಾಲ್ದಾರ್‌ಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X