ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ, ಮೇ 14: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗ ಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರುವ ಕಾನೂನು ಪದವೀಧರ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3.50 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳವರೆಗೆ ತಿಂಗಳಿಗೆ 5000ರೂ.ನಂತೆ ಶಿಷ್ಯವೇತನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ, ಅವಶ್ಯವಿರುವ ದಾಖಲಾತಿಗಳೊಡನೆ ಜೂನ್ 12ರ ಒಳಗೆ ಜಿಲ್ಲಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಶಿವಳ್ಳಿ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.




